ಕಾರಂಜಾ ಸಂತ್ರಸ್ತರ ಸಮಸ್ಯೆ: ಜಲಸಂಪನ್ಮೂಲ ಸಚಿವರ ಜತೆ ಚರ್ಚೆಗೆ ದಿನಾಂಕ ನಿಗದಿ

ಬೀದರ್,ಡಿ.9-ಜಿಲ್ಲೆಯ ಕಾರಂಜಾ ಜಲಾಶಯದ ಹಿನ್ನೀರಿನ ಪ್ರದೇಶದಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ವೈಜ್ಞಾನಿಕ ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಹೋರಾಟದ ಕುರಿತು ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳು ಚರ್ಚೆಗೆ ದಿನಾಂಕ ನಿಗದಿ ಮಾಡುವುದಾಗಿ ಭರವಸೆ ನೀಡಿದ್ದರು. ಅಂತಯೇ ಇಂದು ಸಂತ್ರಸ್ತರ ಜತೆ ಚರ್ಚೆಗೆ ದಿನಾಂಕ ನಿಗದಿ ಮಾಡಿ ತಿಳಿಸಿದ್ದಾರೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕÀ ಡಾ.ಶೈಲೇಂದ್ರ ಬೆಲ್ದಾಳೆ ಅವರು ತಿಳಿಸಿದ್ದಾರೆ.
ಬಸವಕಲ್ಯಾಣ ಶಾಸಕರಾದ ಶರಣು ಸಲಗಾರ, ಹುಮನಾಬಾದ್ ಶಾಸಕರಾದ ಸಿದ್ದು ಪಾಟೀಲ ಅವರೊಂದಿಗೆ ಬೆಳಗಾವಿಯಲ್ಲಿ ಗುರುವಾರ ಜಲ ಸಂಪನ್ಮೂಲ ಸಚಿವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಸಂತ್ರಸ್ತರ ಹೋರಾಟ ಕುರಿತು ಗಮನಕ್ಕೆ ತಂದಾಗ 10 ಪ್ರಮುಖರಿಗೆ ಇದೆ ದಿ.12 ರಂದು ಚರ್ಚೆಗೆ ಕರೆಯುವಂತೆ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲೇ ಅಂದು ಚರ್ಚೆ ನಡೆಸಿ ಸಂತ್ರಸ್ತರ ಹೋರಾಟಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಬೆಲ್ದಾಳೆ ತಿಳಿಸಿದ್ದಾರೆ.