ಕಾರಜೋಳ ಬಳಿ ರಸ್ತೆ ಅಪಘಾತ: ನಾಲ್ವರಿಗೆ ಗಾಯ

ವಿಜಯಪುರ,ಮಾ.4:ಇನ್ನೋವಾ ಕಾರ್ ಹಾಗೂ
ಟಾಟಾ ಮ್ಯಾಜಿಜ್ ವಾಹನಗಳ ಮಧ್ಯೆ ಪರಸ್ಪರ ಡಿಕ್ಕಿ ಸಂಭವಿಸಿ
ಟಾಟಾ ಮ್ಯಾಜಿಕ್ ವಾಹನದಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ಜಿಲ್ಲೆ ಬಬಲೇಶ್ವರ ತಾಲೂಕಿನ ಕಾರಜೋಳ ಬಳಿಯ
ಎನ್ ಎಚ್ 218 ರಲ್ಲಿ ನಡೆದಿದೆ.
ಕೊಲ್ಹಾರದಿಂದ ವಿಜಯಪುರಕ್ಕೆ ಬರುತ್ತಿದ್ದ ಇನ್ನೋವಾ ಕಾರ್
ಚಡಚಣ ಪಟ್ಟಣದಿಂದ ಹಾವೇರಿಗೆ ತೆರಳುತ್ತಿದ್ದ ಟಾಟಾ ಮ್ಯಾಜಿಕ್ ವಾಹನಗಳು ಕಾರಜೋಳ ಬಳಿ ಮುಖಾಮುಖಿ ಡಿಕ್ಕಿಯಾಗಿ ವಾಹನಗಳ ಮುಂಭಾಗ ನಜ್ಜುಗುಜ್ಜಾಗಿವೆ.
ಘಟನಾ ಸ್ಥಳಕ್ಕೆ ಬಬಲೇಶ್ವರ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು.
ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬಬಲೇಶ್ವರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.