
ಬೆಂಗಳೂರು,ಏ.23- ಇನೋವಾ, ಆಲ್ಟೋ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡ್ಯ ಗ್ರಾಮದ ದಶಪಥ ಹೆದ್ದಾರಿಯಲ್ಲಿ ನಡೆದಿದೆ.
ಕೆಂಗೇರಿಯ ರವಿ ಪೂಜಾರ್ (46), ಇಂಚರ ಪೂಜಾರ್ (15), ಸಿರಿ ಪೂಜಾರ್ (2) ಮೃತ ದುರ್ದೈವಿಗಳು.
ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚನ್ನಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಅಪಘಾತದಲ್ಲಿ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ಚನ್ನಪಟ್ಟಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.