ಕಾರು ಅಪಘಾತ:ಬಂಗರಗಾ ಗುರುಲಿಂಗ ಶಿವಾಚಾರ್ಯರು ಲಿಂಗೈಕ್ಯ

ಅಳಂದ,ಏ.23: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಳಂದ ತಾಲೂಕಿನ ಬಂಗರಗಾ ಚರಂತೇಶ್ವರ ಹಿರೇಮಠದ ಪೀಠಾಧಿಪತಿ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ.
ಅಪಘಾತದ ಬಳಿಕ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಲಿಂಗೈಕ್ಯರಾಗಿದ್ದಾರೆ.
ಅಳಂದ ಪಟ್ಟಣದ ಬಸ್ ಡಿಪೆÇೀ ಬಳಿ ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಹಾಗೂ ಕಿಣ್ಣಿ ಸುಲ್ತಾನದ ಶಿವಾ ಶಾಂತಲಿಂಗೇಶ್ವರ ಶಿವಾಚಾರ್ಯರು ಗಂಭೀರವಾಗಿ ಗಾಯಗೊಂಡಿದ್ದರು.
ಹೀಗಾಗಿ ಗುರುಲಿಂಗ ಶಿವಾಚಾರ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಹಾಗೂ ಶಿವಾ ಶಾಂತಲಿಂಗೇಶ್ವರ ಶಿವಾಚಾರ್ಯರನ್ನು ಅಳಂದದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಚಿಕಿತ್ಸೆ ಫಲಿಸದೆ ಲಿಂಗೈಕ್ಯರಾಗಿದ್ದಾರೆ.
ಬಂಗರಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಬಂಗರಗಾ ಗ್ರಾಮಕ್ಕೆ ದೌಡಾಯಿಸಿದ ಮಾದನ ಹಿಪ್ಪರಗಿಯ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಶ್ರೀಮಠದ ಭಕ್ತರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದದಲ್ಲಿ ಚಲಗೇರಿಯ ಶಾಂತವೀರ ಶಿವಾಚಾರ್ಯರು ಶ್ರೀಗಳು ಅಂತಿಮ ದರ್ಶನ ಪಡೆದರು.