
ಕೊಡಗು: ಏ.15:- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‍ಆರ್‍ಟಿಸಿ) ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಈ ದರ್ಘಟನೆಯಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಭೀಮನಹಳ್ಳಿಯ 6 ಮಂದಿ ಸಾವನ್ನಪ್ಪಿದ್ದಾರೆ.
ಕೊಡಗು ಜಿಲ್ಲೆಯ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ಇಂದು ಮಧ್ಯಾಹ್ನದ ವೇಳೆ ಕಾರು ಹಾಗೂ ಏSಖಖಿಅ ಬಸ್ ನಡುವೆ ಅಪಘಾತ ಸಂಭವಿಸಿದೆ. ಇನ್ನು ಎರಡವೂ ವಾಹನಗಳು ತೀವ್ರ ವೇಗವಾಗಿ ಬರುತ್ತಿದ್ದರಿಂದ ಅಪಘಾತದಿಂದ ಕಾರು ಸಂಪುರ್ಣ ನಜ್ಜುಗುಜ್ಜಾಗಿದೆ. ಇನ್ನು ಕಾರಿನಲ್ಲಿ ಒಟ್ಟು 8 ಜನರು ಪ್ರಯಾಣ ಮಾಡುತ್ತಿದ್ದು, ಅದರಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಳಿದಂತೆ ಐವರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೂವರು ಸಾವನ್ನಪ್ಪಿದ್ದಾರೆ.ಉಳಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.ಆದರೆ, ಮೃತರ ಹೆಸರು ಮತ್ತು ಯಾವ ಉದ್ದೇಶಕ್ಕೆ ಪ್ರಯಾಣ ಮಾಡುತ್ತಿದ್ದರು ಎಂಬುದು ತಿಳಿದುಬಂದಿಲ್ಲ.
ಮಂಡ್ಯ ಜಿಲ್ಲೆಯ ಆರು ಜನರು ಸಾವು: ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು. ಕೆಎಎಸ್‍ಆರ್‍ಟಿಸಿ ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಇನ್ನು ಅಪಘಾತದಿಂದ ಕಾರಿನ ಮುಂಭಾಗ ಮತ್ತು ಮೇಲ್ಭಾಗ ಪೂರ್ಣವಾಗಿ ನಜ್ಜುಗುಜ್ಜಾಗಿ ಹೋಗಿದೆ. ಕಾರಿನಲ್ಲಿದ್ದವರು ಮೂಲತಃ ಮಂಡ್ಯ ಜಿಲ್ಲೆಯವರು ಆಗಿದ್ದು, ಒಟ್ಟು ಆರು ಮಂದಿ ಸಾವನ್ನಪ್ಪಿದರೆ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಮಳವಳ್ಳಿ ಭೀಮನಹಳ್ಳಿ ಗ್ರಾಮದವರು:ಈ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ಇನ್ನು ಮೃತರನ್ನು ಭೀಮನಹಳ್ಳಿಯ ಮಹದೇವ, ಶೀಲಾ, ಎಸ್‍ಎಸ್ ಗೌಡ, ಜಿಎನ್.ಗೌಡ ಮೃತರು ಎಂದು ತಿಳಿದುಬಂದಿದೆ. ಮೃತ ಮಕ್ಕಳಲ್ಲಿ ಒಂದು ಮಗು 3 ವರ್ಷದ್ದು ಹಾಗೂ ಇನ್ನೊಂದು ಮಗು 6 ತಿಂಗಳ ಹಸುಗೂಸು ಎಂದು ತಿಳಿದುಬಂದಿದೆ. ಇನ್ನು ತೀವ್ರ ಗಾಯಗೊಂಡ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರನ್ನೂ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.