ಕಾರು ಪಲ್ಟಿನಾಲ್ವರು ಗಂಭೀರ

ಬೆಂಗಳೂರು,ಜೂ.೮- ವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಕೆರೆಗೆ ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಸ್ಕೋಡಾ ಕಾರು ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಬಳಿ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬರುವ ವೇಳೆ ಘಟನೆ ನಡೆದಿದೆ.
ಸಿನಿನೀಯ ಶೈಲಿಯಲ್ಲಿ ಅತಿವೇಗದಿಂದ ಕಾರು ಸರ್ವಿಸ್ ರಸ್ತೆಗೆ ಬರುವ ವೇಳೆ ಕೆರೆಗೆ ಹಾರಿದೆ. ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.