ಕಾರು ಬೈಕ್‌ಗೆ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸಾವು

ನಾಗ್ಪುರ್(ಮಹಾರಾಷ್ಟ್ರ), ಸೆ.೧೦- ಅತಿವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಗರದ ಸಕ್ಕರೆದಾರ್ ಸೇತುವೆ ಬಳಿ ನಿನ್ನೆ ತಡರಾತ್ರಿ ಸಂಭವಿಸಿದೆ.
ಸಕ್ಕರೆ ದಾರ್ ಸೇತುವೆ ಬಳಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ, ಅವರ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಬೈಕ್‌ಗೆ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಎಲ್ಲರೂ ಸೇತುವೆ ಮೇಲಿಂದ ಕಳೆಗೆ ಹಾರಿ ಬಿದ್ದು ಮೃತಪಟ್ಟಿದ್ದಾರೆ.
ಸೇತುವೆ ಮೇಲೆ ಜನಸಂದಣಿ ಇಲ್ಲದ ಕಾರಣ ಕಾರು ಚಾಲಕ ಗಣೇಶ್ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಈ ವೇಳೆ, ಒಂದರ ಹಿಂದೆ ಒಂದರಂತೆ ಒಟ್ಟು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ಸವಾರ, ಅವರ ಇಬ್ಬರು ಮಕ್ಕಳು ಹಾಗೂ ತಾಯಿ ಅಸುನೀಗಿದ್ದಾರೆ. ಉಳಿದಂತೆ ಬೇರೆ ಬೈಕ್ ಸವಾರರಿಗೆ ಗಾಯವಾಗಿದೆ.
ಮಾಹಿತಿ ತಕ್ಷಣವೇ ಸಕ್ಕರೆದಾರ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನ ಚಿಕಿತ್ಸೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಜೊತೆಗೆ ಕಾರು ಚಾಲಕ ಗಣೇಶ್ ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವವರ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.