ಕಾರು-ಬೈಕ್ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಕಲಬುರಗಿ,ಮೇ.14-ಅಫಜಲಪುರ ರಸ್ತೆಯ ಹಡಗಿಲ್ ಹಾರುತಿ ಬಳಿ ಇಂದು ಬೆಳಿಗ್ಗೆ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಮೇಲೆ ಹೊರಟಿದ್ದ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಲಬುರಗಿಯ ಬಸವನಗರ ನಿವಾಸಿಗಳು ಎಂದು ತಿಳಿದುಬಂದಿದೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.