ಮಳವಳ್ಳಿ: ಕಾರು ಮತ್ತು ಬುಲೋರೋ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ ೨೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ದಾಸನದೊಡ್ಡಿಯಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸಮೀಪದ ಜಾಗೇರಿ ಗ್ರಾಮದ ಮಾದಲಿಯಮ್ಮ(60) ಜೆಸ್ಮಿನ್ ಮೇರಿ (52) ಎಂಬುವವರು ಮೃತರಾಗಿದ್ದು, ಐದು ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಡ್ಯ ಮೈಸೂರು ಆಸ್ಪತ್ರೆಗೆ ಸೇರಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ ೨೦ಕ್ಕೂ ಹೆಚ್ಚು ಮಂದಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾಣಿಸಲಾಗಿದೆ.
ಮದ್ದೂರು ತಾಲ್ಲೂಕಿನ ಕೆಪಿದೊಡ್ಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಬುಲೋರೋದಲ್ಲಿ ಶಿವನಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ಊಟ ಮುಗಿಸಿ ತಮ್ಮ ಸ್ವಗ್ರಾಮಕ್ಕೆ ಬರುತ್ತಿದ್ದಾಗ ಎದುರಿನಿಂದ ಬಂದ ಕಾರು ಮುಖಾ ಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೇ ಐದು ಮಂದಿಯ ಸ್ಥಿತಿ ಚಿಂತಜನಕವಾಗಿದೆ.
ಅಪಘಾತ ಸಂಭವಿಸಿದ ತಕ್ಷಣವೇ ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತರ್ತುಚಿಕಿತ್ಸಾವಾಹನದ ಮೂಲಕ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಗಾಯಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮತ್ತು ಮೈಸೂರು ಆಸ್ಪತ್ರೆಗೆ ಕಳುಹಿಸಲಾಯಿತು.
ಅಪಾರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್‌ಪಿ ನವೀನ್‌ಕುಮಾರ್, ಶಾಸಕ ಡಾ, ಕೆ,ಅನ್ನದಾನಿ,ಮಾಜಿ ಸಚಿವ ಪಿ.ಎಂ ನರೇಂದ್ರಸ್ವಾಮಿ ಆಸ್ಪತ್ರೆಗೆ ಬೇಟಿ ನೀಡಿ ಗಾಯಳುಗಳಿಗೆ ಆತ್ಕಸೈರ್ಯತುಂಬಿ, ಮೃತ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಬೆಳಕವಾಡಿ ಪೊಲೀಸರು ಪ್ರಕರಣ ದಾಖಲಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.