ಕಾರು-ಲಾರಿ ಡಿಕ್ಕಿ: ಬೆಂಗಳೂರಿನ ಒಂದೇ ಕುಟುಂಬದ 7 ಮಂದಿ ಸಾವು

ಚೆನ್ನೈ, ಅ.15- ಲಾರಿ ಮತ್ತು ಕಾರು ಮುಖಾಮುಖಿ ಅಪ್ಫಳಿಸಿ ಕಾರಿನಲ್ಲಿ ದ್ದ ಒಂದೇ‌ ಕುಟುಂಬ ಏಳು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ಸಂಭವಿಸಿದೆ.
ಮೃತರೆಲ್ಲರೂ ಬೆಂಗಳೂರಿನ ನಿವಾಸಿಗಳೆಂದು ಗುರುತಿಸಲಾಗಿದೆ. ಮೃತರ ಪೈಕಿ ಇಬ್ಬರು ಮಕ್ಕಳು ಮಹಿಳೆಯರೂ ಸೇರಿದ್ದಾರೆ.
ಪಕ್ಕಿರಿಪಾಳ್ಯಂ ಬಳಿಯ ತಿರುವಣ್ಣಮಲೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಣ್ಣಾಮಲೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.
ತಿರುವಣ್ಣಮಲೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ತಿರುವಣ್ಣಾಮಲೈನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿತ್ತು. ತಿರುವಣ್ಣಮಲೈ ಜಿಲ್ಲೆಯ ಪಕ್ಕಿರಿಪಾಳ್ಯಂ ಪಂಚಾಯತ್​ನ ಬಳಿ ಎದುರಿನಿಂದ ಬಂದ ಲಾರಿಗೆ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತಕ್ಕೀಡಾದ ಲಾರಿ ಸಿಂಗಾರಪೇಟೆಯಿಂದ ತಿರುವಣ್ಣಮಲೈ ಕಡೆಗೆ ಬರುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಮೃತರು ತಿರುವಣ್ಣಾಮಲೈನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ, ಬೆಂಗಳೂರಿಗೆ ವಾಪಸ್ಸಾಗುತ್ತಿದ್ದರು. ಇನ್ನು ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದರೆ, ಇನ್ನೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರಂತಕ್ಕೆ ತೀವ್ರ ಸಂತಾಪ ವ್ತಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ‌. ಸ್ಟಾಲಿನ್ ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ