ಕಾರ್ಖಾನೆ ಗೋದಾಮಿನ ಬೃಹತ್ ಬೆಂಕಿ ಮೂವರ ಸೆರೆ

ಬೆಂಗಳೂರು,ನ.11-ಹೊಸಗುಡ್ಡದಹಳ್ಳಿಯ ರೇಖಾ ರಾಸಾಯನಿಕ ಕಾರ್ಖಾನೆ ಗೋದಾಮಿನ ಬೃಹತ್ ಬೆಂಕಿ ಪ್ರಕರಣ ಸಂಬಂಧ ಬ್ಯಾಟರಾಯನಪುರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ‌


ಗೋದಾಮಿನ ಮಾಲೀಕರಾದ ಸಜ್ಜನ್ ರಾಜ್ ಮತ್ತು ಪತ್ನಿ ಕಮಲಾ, ಮಗ ಅನಿಲ್ ಬಂಧಿತರಾಗಿ ಆರೋಪಿಗಳಾಗಿದ್ದಾರೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.
.ಪರವಾನಗಿ ಪಡೆಯದೆ ಗೋಡೌನ್​ ನಡೆಸುತ್ತಿದ್ದ ಆರೋಪದ ಮೇಲೆ ಆರೋಪಿಗಳನ್ನು ವಿಚಾರಣೆ ನಡೆಸಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.


ಘಟನೆಯಿಂದ ಸುಮಾರು 4 ಕೋಟಿ ರೂಪಾಯಿಯಷ್ಟು ನಷ್ಟವಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳು ಆರೋಪಿಗಳ ವಿಚಾರಣೆ ಬಳಿಕ ವರದಿಯನ್ನು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.