ಕಾರ್ಗಿಲ್ ವಿಜಯ ದಿವಸ ಆಚರಣೆ

ಬೈಲಹೊಂಗಲ,ಜು.27: ಪಟ್ಟಣದಲ್ಲಿ ಅಖಿಲ ಕರ್ನಾಟಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸ್ಮರಣೋತ್ಸವ ಸಮಿತಿ, ಕಾರ್ಯನಿರತ ಪತ್ರಕರ್ತರ ಸಂಘ, ಯುವಕರಿಂದ ಕಾರ್ಗಿಲ್ ವಿಜಯ ದಿವಸ ಆಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸೇರಿದ ಸಾರ್ವಜನಿಕರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಶ್ರೀಮಾತಾ ದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮದರ್ಶಿ ಡಾ. ಮಹಾಂತಯ್ಯಶಾಸ್ತ್ರೀ ಆರಾದ್ರಿಮಠ ಸಾನ್ನಿಧ್ಯವಹಿಸಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿಗಳ ತವರೂರು ಬೈಲಹೊಂಗಲ ನಾಡು ಹಲವಾರು ವೀರರು, ಶೂರರನ್ನು ನಾಡಿಗೆ ಕೊಡುಗೆ ಕೊಟ್ಟಿದೆ. ಅವರೆಲ್ಲರ ತ್ಯಾಗ, ಬಲಿದಾನದ ಪುಣ್ಯದ ಫಲದಿಂದ ಸ್ವಾತಂತ್ರ್ಯ ದೊರೆತಿದೆ. ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ, ಬಲಿದಾನ ಮಾಡಿ ರಾಷ್ಟ್ರಕ್ಕೆ ಜಯ ತಂದುಕೊಟ್ಟ ವೀರ ಯೋಧರನ್ನು ಪ್ರತಿಯೊಬ್ಬರು ಸ್ಮರಣೆ ಮಾಡಲೇಬೇಕು. ದೇಶದ ಗಡಿ ಕಾಯುವ ಯೋಧರಿಗೆ ಗೌರವ ನೀಡಲೇಬೇಕು ಎಂದರು.
ರಾಯಣ್ಣ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ರಾಜು ಸೊಗಲ, ಪತ್ರಕರ್ತ ಮಹಾಂತೇಶ ತುರಮರಿ ಮಾತನಾಡಿದರು. ಸಿಪಿಐ ಯು.ಎಚ್.ಸಾತೇನಹಳ್ಳಿ, ರಾಯಣ್ಣ ಸ್ಮರಣೋತ್ಸವ ಸಮಿತಿ ಉಪಾಧ್ಯಕ್ಷ ಸೋಮನಾಥ ಸೊಪ್ಪಿಮಠ, ಪತ್ರಕರ್ತ ವಿರುಪಾಕ್ಷ ವಾಲಿ, ಬಿಜೆಪಿ ಮುಖಂಡರಾದ ಮಡಿವಾಳಪ್ಪ ಹೋಟಿ, ಗುರು ಮೆಟಗುಡ್ಡ, ವಿಶ್ವಹಿಂದೂ ಪರಿಷದ್ ಉಪಾಧ್ಯಕ್ಷ ಶಿವಾನಂದ ಬಡ್ಡಿಮನಿ ಮತ್ತಿತರರು ಉಪಸ್ಥಿತರಿದ್ದರು.