ಕಾರ್ಗಿಲ್ ಹುತಾತ್ಮರಿಗೆ ನಮನ

ಕಲಬುರಗಿ,ಜು 26:ಕಾರ್ಗಿಲ್ ವಿಜಯ್ ದಿವಸವಾದ ಇಂದು ಹುತಾತ್ಮ ಯೋಧರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.
ಪಾಕಿಸ್ತಾನದ ಸೈನ್ಯವನ್ನು ಸದೆಬಡೆದು ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ವಿಜಯೋತ್ಸವದ ನೆನಪಿಗಾಗಿ ಪ್ರತಿ ವರ್ಷ ಕಾರ್ಗಿಲ್ ವಿಜಯ್ ದಿವಸ್ ಅನ್ನು ಪ್ರತಿ ಜುಲೈ 26ರಂದು ಆಚರಿಸಲಾಗುತ್ತದೆ.
ಪಾಕಿಸ್ತಾನದ ವಿರುದ್ಧ ಭಾರತದ ಸಶಸ್ತ್ರ ಪಡೆಗಳು ದಿಗ್ವಿಜಯ ಸಾಧಿಸಿ ಭಾರತವನ್ನು ಶತ್ರುಗಳಿಂದ ರಕ್ಷಿಸಿ ಹುತಾತ್ಮರಾದ ವೀರ ಯೋಧರಿಗೆ ನನ್ನ ಗೌರವಪೂರ್ವಕ ನಮನಗಳು ಎಂದು ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.