ಕಾರ್‌ನ ಮೇಲೆ ಬಿದ್ದ ಮರ: ತಪ್ಪಿದ ಅನಾಹುತ


ಪುತ್ತೂರು, ಜು.೧೪- ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಬಿದ್ದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಆರ್ಯಾಪು ಗ್ರಾಮದ ಸಂಟ್ಯಾರ್ ಸೇತುವೆ ಬಳಿ ಬುಧವಾರ ನಡೆದಿದೆ. ಆದರೆ ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನಿನ್ನೆ ಮಧ್ಯಾಹ್ನ ಬೀಸಿದ ಭಾರೀ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ. ಕಾರು ಭಾಗಶಃ ಜಖಂಗೊಂಡಿದ್ದು ಕಾರಿನಲ್ಲಿದ್ದ 1.5 ವರ್ಷದ ಮಗು ಸಹಿತ, ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಆತೂರು ನಿವಾಸಿ ಆಸಿಫ್ ಎಂಬವರು ಚಲಾಯಿಸುತ್ತಿದ್ದ ಕಾರಿನ ಮೇಲೆ ಮರ ಉರುಳಿ ಬಿದ್ದಿದ್ದು, ಅವರು ಕುಟುಂಬ ಸಮೇತರಾಗಿ ಕುಂಬ್ರಕ್ಕೆ ಆಗಮಿಸಿ ಹಿಂತಿರುಗಿ ಪುತ್ತೂರಿಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ. ಕಾರಿನಲ್ಲಿ ಆಸಿಫ್‌ರವರ ಪತ್ನಿ, ಅತ್ತೆ, ನಾದಿನಿ ಹಾಗೂ ಅವರ 1.5 ವರ್ಷದ ಮಗು ಪ್ರಯಾಣಿಸುತ್ತಿದ್ದರೆನ್ನಲಾಗಿದೆ.