ಕಾರ್ಮಿಕರಿಂದ ಬದುವು ನಿರ್ಮಾಣ

ಲಕ್ಷ್ಮೇಶ್ವರ, ಏ2: ತಾಲೂಕಿನ ಬಾಲೆ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ದೃಷ್ಟಿಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಭರವಸೆಯ ಕಾಮಗಾರಿಗಳನ್ನು ಆರಂಭಿಸಲಾಯಿತು.
ಕಾರ್ಮಿಕರು ನಿಗದಿಪಡಿಸಿದ ಜಮೀನುಗಳಿಗೆ ತೆರಳಿ ಅಲ್ಲಿ ಬದುವು ನಿರ್ಮಾಣ ಕಾರ್ಯದಲ್ಲಿ ನಿರತರಾದರು.
ಜಾಬ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಕ್ಕೂ ಕೆಲಸ ನೀಡುವ ಉದ್ದೇಶದಿಂದ ಮತ್ತು ಕಾರ್ಮಿಕರು ಕೃಷಿ ಚಟುವಟಿಕೆಗಳು ಬರದ ಹಿನ್ನೆಲೆಯಲ್ಲಿ ಉದ್ಯೋಗ ನೀಡುವ ದೃಷ್ಟಿಯಿಂದ ಮತ್ತು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಪ್ಪಿಸಲು ತಾಲೂಕ ಪಂಚಾಯಿತಿಯಿಂದ ಅನುಮೋದನೆ ಪಡೆದ ಕ್ರಿಯಾಯೋಜನೆಗಳೊಂದಿಗೆ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದೆ.
ಈ ಕುರಿತು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಎಸ್ ಬಿ ಒಡಕನ ಗೌಡ ರ ಅವರು ಪ್ರತಿಕ್ರಿಯೆ ನೀಡಿ ಬೆಳಗಿನಿಂದಲೇ ಸಾವಿರಾರು ಕಾರ್ಮಿಕರು ಎಂ ಎನ್ ಆರ್ ಇ ಜಿ ಕಾಮಗಾರಿಯಲ್ಲಿ ತೊಡಗಿಸಿಕೊಂಡಿದ್ದು ಸರ್ಕಾರ ಕೃಷಿ ಕೂಲಿ ಕಾರ್ಮಿಕರು ಕೆಲಸ ಅರಸಿ ಗುಳೆ ಹೋಗುವುದನ್ನು ತಪ್ಪಿಸುವುದೇ ಮೂಲ ಉದ್ದೇಶವಾಗಿದೆ ಎಂದರು.