ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಿ

ಸಂಜೆವಾಣಿ ವಾರ್ತೆ,
ಮರಿಯಮ್ಮನಹಳ್ಳಿ, ಮೇ.12: ಸರ್ಕಾರದ  ಸೌಲಭ್ಯಗಳನ್ನು ಪ್ರತಿಯೊಬ್ಬ ಕಾರ್ಮಿಕ ಸದುಪಯೋಗ ಪಡೆದುಕೊಳ್ಳಬೇಕೆಂದು ಬಿಜೆಪಿ ಮುಖಂಡ ಕೃಷ್ಣನಾಯ್ಕ್ ಹೇಳಿದರು.
ಅವರು ಮರಿಯಮ್ಮನಹಳ್ಳಿಯ ಕರ್ನಾಟಕ ಅಸಂಘಟಿತ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ಹೋಬಳಿ ಘಟಕದವರು ದುರ್ಗಾದಾಸ್ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರಿಗೆ ಉಚಿತ ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಮಿಕರು ಬೆಳಿಗ್ಗೆಯಿಂದ ಸಂಜೆವರೆಗೂ ತಮ್ಮ ತಮ್ಮ ಕೆಲಸದಲ್ಲಿ ತೊಡಗಿಸಿಕೊಂಡಿರುವುದರಿಂದ  ಅವರು ತಮ್ಮ ಸಮಯವನ್ನೆಲ್ಲ ಕೆಲಸದಲ್ಲೆ ಕಳೆಯುತ್ತಾರೆ. ಆದರೆ  ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಮಾಹಿತಿ ಇರುವುದಿಲ್ಲ. ಆದ್ದರಿಂದ ಕಾರ್ಮಿಕ ಸಂಘಟನೆಗಳು ಕೂಲಿ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ನೀಡುವ ಕಾರ್ಯವನ್ನು ಮಾಡುವುದರ ಜೊತೆಗೆ ಅವುಗಳನ್ನು ಕೊಡಿಸುವ ಕೆಲಸ ಮಾಡಬೇಕಿದೆ ಎಂದರು. ಅಲ್ಲದೇ ಎಲ್ಲಾ ಕಾರ್ಮಿಕರು ಸಂಘಟಿತರಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಸಲಹೆ ಮಾಡಿದರು.
ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಉಚಿತ ಕಿಟ್‍ಗಳನ್ನು ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಏಕಾಂಬ್ರೇಶ್ ನಾಯ್ಕ್‍ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಬೆಣಕಲ್ಲು ಭಾಷ, ಆದಿಮನಿ ಹುಸೇನ್‍ಬಾಷ, ಸಂಘಟನೆಯ ಮುಖಂಡರಾದ ಗವಿಸಿದ್ಧಪ್ಪ ಬಿ ನಾಯ್ಕ್, ಹ್ಯಾಟಿ ಹನುಮಂತಪ್ಪ, ಬಿ ಪ್ರಸಾದ ಕುಮಾರ, ಹರಿಶ್ಚಂದ್ರ ನಾಯ್ಕ್, ಎಮ್ ರವಿಕುಮಾರ,  ಹೆಚ್.ರಷೀದ್, ಅಂಜಿನಪ್ಪ, ಕಮಲಾನಾಯ್ಕ್, ಬಿ. ಆನಂದ್, ಸುಬ್ರಮಣ್ಯ, ಅಂಜಿನಪ್ಪ, ಹೆಚ್.ರಷೀದ್ ಹಾಗೂ ಮರಿಯಮ್ಮನಹಳ್ಳಿ ಹೋಬಳಿ ಘಟಕದ ಸರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಯಮನೂರಪ್ಪ ಕೊಪ್ಪಳ  ನಿರೂಪಿಸಿದರು.