
ಬ್ಯಾಡಗಿ,ಮೇ.2: ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಗೌರವ ಸಲ್ಲಿಸಲು ಮೇ 1ರಂದು ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಗ್ರಾಪಂ ಅಭಿವೃಧ್ದಿ ಅಧಿಕಾರಿ ಗದಿಗೆಪ್ಪ ಕೊಪ್ಪದ ಹೇಳಿದರು.
ತಾಲೂಕಿನ ಕುಮ್ಮೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಸನಕೊಪ್ಪ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೈಗೆತ್ತಿಕೊಂಡಿರುವ ಕೆರೆ ಅಭಿವೃದ್ಧಿ ಕಾಮಗಾರಿಯ ಸ್ಥಳದಲ್ಲಿ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೀವನದ ಕಠಿಣ ಸವಾಲುಗಳನ್ನೂ ಮೆಟ್ಟಿ ನಿಂತು ಪರಿಶ್ರಮದಲ್ಲಿಯೇ ಬದುಕಿನ ಖುಷಿ ಕಾಣುವ ಕಾರ್ಮಿಕರೇ ಈ ದೇಶದ ಆಸ್ತಿಯಾಗಿದ್ದು, ಕಠಿಣ ಪರಿಶ್ರಮಕ್ಕೆ ಸ್ಫೂರ್ತಿಯಾಗಿದ್ದಾರೆ. ಕಾರ್ಮಿಕರ ದುಡಿಮೆಯಲ್ಲಿ ದೇಶದ ಅಭಿವೃದ್ಧಿ ಅಡಗಿದೆ ಎಂದರಲ್ಲದೇ, ಎಲ್ಲ ಕಾರ್ಮಿಕರಿಗೂ ಶುಭ ಕೋರಿ ಸಿಹಿ ಹಂಚಿದರು.