ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಿಸಿದ ಶಾಸಕ ಲಕ್ಷ್ಮಣ ಸವದಿ

ಅಥಣಿ :ಜೂ.11: ಕಾರ್ಮಿಕರ ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಸರ್ಕಾರ ಹಲವು ಯೋಜನೆ ಹಮ್ಮಿಕೊಂಡಿದೆ. ಇದರಲ್ಲಿ ಶಾಲಾ ಮಕ್ಕಳಿಗೆ ಶೈಕ್ಷಣಿಕ ಕಿಟ್ ವಿತರಿಸುವ ಕಾರ್ಯಕ್ರಮವು ಒಂದಾಗಿದೆ’ ಎಂದು ಮಾಜಿ ಡಿಸಿಎಂ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅವರು ಪಟ್ಟಣದ ತಮ್ಮ ನಿವಾಸದಲ್ಲಿ ತಾಲೂಕಾ ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಒದಗಿಸಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಂಕೇತಿಕವಾಗಿ ಶಾಲಾ ಸಾಮಗ್ರಿಗಳ ಕಿಟ್‍ಗಳನ್ನು ವಿತರಿಸಿ ಮಾತನಾಡುತ್ತಿದ್ದರು, ಅವರು ಮುಂದೆ ಮಾತನಾಡುತ್ತಾ ಕಟ್ಟಡ ಕಾರ್ಮಿಕರ 150 ಮಕ್ಕಳಿಗೆ ಶಾಲಾ ಕಿಟ್‍ಗಳ ಸೌಲಭ್ಯ ಒದಗಿಸಲಾಗಿದೆ, ಕಟ್ಟಡ ಕಾರ್ಮಿಕ ಮಕ್ಕಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ ಸಾಮಾಜಿಕ ಮತ್ತು ಆರ್ಥಿಕವಾಗಿ ಮುಂದೆ ಬರಬೇಕು. ಸರ್ಕಾರ ನೀಡಿರುವ ಈ ಶೈಕ್ಷಣಿಕ ಪರಿಕರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಅಥಣಿ ತಾಲೂಕು ಕಾರ್ಮಿಕ ನಿರೀಕ್ಷಕ ಸಂಜೀವ ಭೋಸಲೆ, ಸಿಬ್ಬಂದಿಗಳಾದ ನಾಗರಾಜ ಜಿ., ಸೇರಿದಂತೆ ವಿದ್ಯಾರ್ಥಿಗಳು/ ವಿದ್ಯಾರ್ಥಿನಿಯರು, ಮುಖಂಡರು, ಉಪಸ್ಥಿತರಿದ್ದರು.