ಕಾರ್ಮಿಕ ಅಧಿಕಾರಿ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ,ಆ.23-ಜಿಲ್ಲಾ ಕಾರ್ಮಿಕ ಅಧಿಕಾರಿಯನ್ನು ಅಮಾನತ್ತು ಮಾಡಬೇಕು ಹಾಗೂ ಇಬ್ಬರು ಡಾಟಾ ಎಂಟ್ರಿ ಆಪರೇಟರ್‍ಗಳನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಇಂಡಿಯನ್ ನ್ಯಾಷನಲ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ಕಮಿಟಿ ಜಿಲ್ಲಾ ಶಾಖೆ ನೇತೃತ್ವದಲ್ಲಿ ಉಪ ಕಾರ್ಮಿಕ ಆಯುಕ್ತರ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು.
ಬಾಕಿ ಇರುವ ಶೈಕ್ಷಣಿಕ ಅರ್ಜಿಗಳಿಗೆ ಸಹಾಯಧನ ಬಿಡುಗಡೆ ಮಾಡಬೇಕು, ಪಿಂಚಣಿ ಅರ್ಜಿ ಸಲ್ಲಿಸಲು ಇರುವ ಕಾಲಮಿತಿಯನ್ನು ರದ್ದುಪಡಿಸಬೇಕು, ನವೀಕರಣಕ್ಕೆ ” ವೇತನ ಚೀಟಿ” ಕೈ ಬಿಡಬೇಕು, ಸಕಾಲ ಅಧಿನಿಯಮದಲ್ಲಿ ನಿಗದಿ ಪಡಿಸಿದ ಅವಧಿಯೊಳಗೆ ಕಡ್ಡಾಯವಾಗಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕಮಿಟಿ ಜಿಲ್ಲಾ ಅಧ್ಯಕ್ಷ ಅಶೋಕ ಘೂಳಿ, ರಾಜ್ಯ ಸಂಚಾಲಕ ಮಿರಾಜ್ ಕಲ್ಯಾಣವಾಲಾ, ಉಪಾಧ್ಯಕ್ಷ ಮಲ್ಲಿಕಾರ್ಜುನ ಮಾಳಗೆ, ಚಂದು ಜಾಧವ, ಶಿವಲಿಂಗ ಹಾವನೂರ, ಸಂಜುಕುಮಾರ ಗುತ್ತೇದಾರ, ಸಂಜಯಕುಮಾರ ಖೈರಾಟ, ಶಂಕರ ಕಟ್ಟಿಸಂಗಾವಿ,ಹಣಮಂತರಾಯ ಪೂಜಾರಿ, ರಾಮು ನೀಲೂರ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.