ಕಾರ್ಮಿಕ ಸಂಘದ ಪದಾಧಿಕಾರಿಗಳ ಸಭೆ

(ಸಂಜೆವಾಣಿ ನ್ಯೂಸ್)
ಹುಬ್ಬಳ್ಳಿ,ಸೆ4: ಅಖಿಲ ಕರ್ನಾಟಕ ಕಟ್ಟಡ ಕಾರ್ಮಿಕರ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ರಿ ಬೆಂಗಳೂರು ಹಾಗೂ ಧಾರವಾಡ ಜಿಲ್ಲಾ ಘಟಕದ ಹುಬ್ಬಳ್ಳಿಯ ಕಾರ್ಯಾಲಯದಲ್ಲಿ ಕಾರ್ಮಿಕ ಸಂಘದ ಪದಾಧಿಕಾರಿಗಳ ಸಭೆ ಆಯೋಜಿಸಲಾಗಿತ್ತು.
ಕಾರ್ಮಿಕ ಮುಖಂಡರಾದ ದೇವರಾಜ್ ದಾಡಿಬಾವಿ ಭಾಗವಹಿಸಿ ಕಾರ್ಮಿಕರು ಸಂಘಟಿತರಾಗಲು ಕರೆ ನೀಡಿದರು. ಕಟ್ಟಡ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು, ಕಾರ್ಮಿಕ ಸಚಿವರಿಗೆ ಮನವಿ ಕೊಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರ, ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸದಸ್ಯರಾದ ಮತ್ತು ಹಿಂದ್ ಮಜ್ದೂರ್ ಸಭಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ನಾಗನಾಥ, ರಾಜ್ಯ ಅಧ್ಯಕ್ಷರಾದ ಅಜಯ್ ಕುಮಾರ್ ಹಡಪದ, ಜಿಲ್ಲಾ ಘಟಕದ ಅಧ್ಯಕ್ಷರಾದ ಮಂಜುನಾಥ ಹಡಪದ, ಧಾರವಾಡ ಜಿಲ್ಲೆಯ ಎಲ್ಲಾ ತಾಲೂಕುಗಳ ಅಧ್ಯಕ್ಷರು, ಸದಸ್ಯರುಗಳು, ಹಾವೇರಿ ಜಿಲ್ಲೆಯ ಹೆಚ್ ಎಮ್ ಎಸ್ ಸಂಯೋಜಿತ ಸಂಘಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.