
ಸಂಜೆವಾಣಿ ವಾರ್ತೆ
ಹಿರಿಯೂರು : ನ.4- ಹಿರಿಯೂರಿಗೆ ಭೇಟಿ ನೀಡಿದ್ದ ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ್ ಲಾಡ್ ರವರಿಗೆ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಜಿ ದಾದಾಪೀರ್ ಇವರ ನೇತೃತ್ವದಲ್ಲಿ ಭೇಟಿ ಮಾಡಿದ ಕಾರ್ಯಕರ್ತರು ತಮ್ಮ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಜಿ ದಾದಾಪೀರ್ ರಾಜ್ಯದಲ್ಲಿ ಕಡು ಬಡತನದಲ್ಲಿ ಜೀವನ ನಡೆಸುತ್ತಿರುವ ಲಕ್ಷಾಂತರ ಜನ ಕಟ್ಟಡ ಕಾರ್ಮಿಕರು ಇದ್ದು ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ 2023 – 24 ನೇ ಸಾಲಿನ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಿಕೊಡಬೇಕು ಹಾಗೂ ಬಡ ಕಟ್ಟಡ ಕಾರ್ಮಿಕರಿಗೆ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡಬೇಕು ಎಂದು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಜಿ ದಾದಾಪೀರ್ ಉಪಾಧ್ಯಕ್ಷರಾದ ಮಾರುತಿರಾವ್ ಜಾದವ್, ಮಹಮದ್ ಸೈಫುಲ್ಲಾ, ಮಹಮದ್ ಶಬ್ಬೀರ್, ಇರ್ಫಾನ್ ಉಲ್ಲ,ಬಾಬಾ ಫಕ್ರುದ್ದೀನ್ ಮತ್ತಿತರರು ಉಪಸ್ಥಿತರಿದ್ದರು