ಕಾರ್ಯಕರ್ತರ ಋಣ ತೀರಿಸಲು ಜನಸೇವಕ ಸಮಾವೇಶ

ಬಾಗಲಕೋಟೆ,ಜ.10: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ತಂದುಕೊಟ್ಟ ಬಿಜೆಪಿ ಕಾರ್ಯಕರ್ತರ ಋಣ ತೀರಿಸಲು ಜನಸೇವಕ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದು ಎಸ್ಟಿ ಮೋರ್ಚಾ ಬಿಜೆಪಿ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ ಹೇಳಿದರು.
ನಗರದ ವೀರಭದ್ರೇಶ್ವರ ಸಾಂಸ್ಕøತಿಕ ಭವನದಲ್ಲಿ ಶನಿವಾರ ಬಿಜೆಪಿ ಎಸ್ಟಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನಕುಮಾರ ಕಟೀಲವರು ರಾಜ್ಯದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನಲೆಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶವನ್ನು ಮಾಡುವ ಮೂಲಕ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷವನ್ನು ಸಂಘಟಿಸಿ ಕಾರ್ಯಕರ್ತರ ಗೆಲುವಿಗೆ ಹೊಸ ಪ್ರಯೋಗ ಮಾಡಿದ್ದು ಯಶಸ್ಸು ಕಂಡಿದ್ದು. ಶೇ.52 ರಷ್ಟು ಬಿಜೆಪಿ ಕಾರ್ಯಕರ್ತರು ಗ್ರಾಮ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈಗ ಕಾರ್ಯಕರ್ತರ ಋಣ ತೀರಿಸಲು ಜನಸವೇವಕ ಸಮಾವೇಶವನ್ನು ರಾಜ್ಯದಲ್ಲಿ ಮಾಡಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಐದು ತಂಡಗಳ ನೇತೃತ್ವದಲ್ಲಿ ಜನಸೇವಕ ಸಮಾವೇಶ ನಡೆಯಲಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಡೆಯುವ ಸಮಾವೇಶಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ರಮೇಶ ಜಾರಕಿಹೊಳಿ, ಸೋಮಣ್ಣ, ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ, ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಗೌಡ ಹಾಗೂ ತಾವು ಸೇರಿ ಜ.12ರಂದು ಜಿಲ್ಲೆಗೆ ಆಗಮಿಸಲಿದ್ದೇವೆ ಹೇಳಿದರು.
ಶಾಸಕರು, ಬಿಟಿಡಿಎ ಅಧ್ಯಕ್ಷರಾದ ಡಾ.ವೀರಣ್ಣ ಚರಂತಿಮಠ ಮಾತನಾಡಿ, ಬಾಗಲಕೋಟೆ ಜಿಲ್ಲೆಯ ಬಿಜೆಪಿ ಭದ್ರಕೋಟೆಯಾಗಲು ಬಿಜೆಪಿ ಕಾರ್ಯಕರ್ತರ ಶ್ರಮ ಹೆಚ್ಚು ಇದೆ. ಪಕ್ಷದ ಸಂಘಟನೆಯಲ್ಲಿರುವ ಎಲ್ಲಾ ಮೋರ್ಚಾ ಕಾರ್ಯಕರ್ತರು, ಪದಾಧಿಕಾರಿಗಳು,ಅಧ್ಯಕ್ಷರು ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ. ಗ್ರಾ.ಪಂ. ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಅಚ್ಚುಕಟ್ಟಾಗಿ ಕೆಲಸ ಮಾಡಿದ್ದರಿಂದ ನಮ್ಮ ಕಾರ್ಯಕರ್ತರು ಹೆಚ್ಚು ಗ್ರಾ.ಪಂ.ಸದಸ್ಯರಾಗಿ ಆಯ್ಕೆಯಾಗಿದ್ದಾರೆ ಎಂದರು.
ಜ.12ರಂದು ಜಿಲ್ಲೆಯಲ್ಲಿ ನಡೆಯುವ ಜನಸೇವಕ ಸಮಾವೇಶವನ್ನು ಯಶಸ್ವಿಗೊಳಿಸಲು ಎಲ್ಲ ತಯಾರಿಯನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು. ­­ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಮಾತನಾಡಿ, ಎಸ್ಟಿ ಮೋರ್ಚಾದಲ್ಲಿ ಬರುವ 51 ಬುಡಕಟ್ಟು ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಸಂಘಟಿಸುವ ಕೆಲಸ ಮಾಡಲಾಗುತ್ತಿದೆ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸಾಮಾನ್ಯ ಮೀಸಲಾತಿ ಇರುವ ಕಡೆ ಎಸ್ಟಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಾರ್ಯಕರ್ತರು ತಂದಿದ್ದಾರೆ ಎಂದು ಹೇಳಿದರು.
ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಯಲ್ಲಪ್ಪ ದಳವಾಯಿ ಮಾತನಾಡಿ, ಕಾಂಗ್ರೆಸ್ ಪಕ್ಷ ಮತಬ್ಯಾಂಕ್ ಆಗಿ ಹಿಂದುಳಿದ ಜನರನ್ನು ಗಣನೆಗೆ ತೆಗೆದುಕೊಂಡರೆ ಅವರ ಏಳ್ಗೆಗಾಗಿ ಏನೂ ಮಾಡಲಿಲ್ಲ. ಬಿಜೆಪಿ ಪಕ್ಷದಲ್ಲಿ ಹಿಂದುಳಿದ ಸಮಾಜದವರ ಅಭಿವೃದ್ದಿಗೆ ಸಾಕಷ್ಟು ಕೆಲಸವನ್ನು ಹಾಗೂ ಸಣ್ಣ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಪಕ್ಷದಲ್ಲಿ ಇದೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಜು ರೇವಣಕರ ಮಾತನಾಡಿ, ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ಥಾನಮಾನ ಸಿಗುವುದು ಬಿಜೆಪಿಯಲ್ಲಿ ಮಾತ್ರ ಎಂದು ಹೇಳಿದರು.
ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಪ್ರ.ಕಾ.ಮಂಜುನಾಥ ಓಲೇಕಾರ, ಯಲ್ಲಪ್ಪ ಕ್ಯಾದಿಗೇರಿ, ರಾಜು ಮುದೇನೂರ, ಯಲ್ಲಪ್ಪ ವಾಲ್ಮೀಕಿ, ಗಣೇಶ, ಶಿವು ನಾಯ್ಕ, ರಂಗನಾಥ ನಾಯ್ಕರ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.