
ವಿಜಯಪುರ:ಎ.24: ಕಾಯಕ ನಿಷ್ಠೆಯ ಮಹತ್ವ ಸಾರಿದ ಜಗಜ್ಯೋತಿ ಬಸವೇಶ್ವರರು ಮಹಾ ಮಾನವತಾವಾದಿ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಭಾನುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅರ್ಥಪೂರ್ಣ ಹಾಗೂ ಸರಳವಾಗಿ ಆಯೋಜಿಸಿದ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು.
ವಿಶ್ವಗುರು ಬಸವಣ್ಣನವರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಮಾನತೆಯನ್ನು ಸಾರಿದರು. ‘ಕಾಯಕವೇ ಕೈಲಾಸ’ ಎಂಬ ತತ್ವದಡಿ ಕಾಯಕದ ಮಹತ್ವ ತಿಳಿಸಿದರು. ಎಲ್ಲ ಶರಣರನ್ನು ಅನುಭವ ಮಂಟಪ ಎಂಬ ವೇದಿಕೆಗೆ ತಂದು, ಅಭಿವ್ಯಕ್ತಿ ಸ್ವಾತಂತ್ರದ ಚರ್ಚಾ ವೇದಿಕೆಯಾಗಿಯನ್ನಾಗಿಸಿದರು. ಸಮಾನತೆ ಸಾರಿದ ಬಸವಣ್ಣನವರ ಆದರ್ಶ-ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು.
ಇದಕ್ಕೂ ಮೊದಲು ವಿಜಯಪುರ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಜಿಲ್ಲಾಧಿಕಾರಿಗಳಾದ ಡಾ ವಿಜಯಮಹಾಂತೇಶ ದಾನಮ್ಮನವರ್ ಜಿಲ್ಲಾ ಪಂಚಾಯಿತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಿಂಧೆ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ್ ಕುಮಾರ್ ಮಾಲಾರ್ಪಣೆಯನ್ನು ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕÀ ಬಿ ನಾಗರಾಜ್ ಸೇರಿದಂತೆ ಇತರರು ಉಪಸ್ಥಿತರಿದ್ದರು.