ಕಾರ್ ಡಿಕ್ಕಿ: ಸವಾರ ಮೃತ್ಯು


ಬೆಳ್ಳಣ್, ಅ.೨೯- ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಿನ್ನೆ ಮಧ್ಯಾಹ್ನ ಬೆಳ್ಮಣ್ ನೀರ್ಚಲ್ ಬಳಿ ನಡೆದಿದೆ
ಮೃತರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು ಗುರುತಿಸಲಾಗಿದೆ. ಇವರು ಸಂಬಂಧಿಕರ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಸು ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರೊಂದು ಇವರ ಬೈಕಿಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರಿಂದಾಗಿ ರಸ್ತೆಗೆ ಎಸೆಯಲ್ಪಟ್ಟ ಜಾರ್ಜ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.