ಕಾರ್‌-ಸ್ಕೂಟರ್‌ ಡಿಕ್ಕಿ: ಸಹೋದರರು ಮೃತ್ಯು


ಕಾರ್ಕಳ, ಜು.೧೧- ನಂದಳಿಕೆ ಮಾವಿನಕಟ್ಟೆಯ ಬಳಿ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸಹೋದರರಿಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಹಾಳೆಕಟ್ಟೆ ಸಂದೀಪ್ ಕುಲಾಲ್ ಮತ್ತು ಸತೀಶ್ ಕುಲಾಲ್ ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಬೆಳ್ಮಣ್ ಕಡೆಗೆ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿದ್ದ ಇನೋವಾ ಕಾರಿಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ಪರಿಣಾಮ ಸಂದೀಪ್ ಸ್ಥಳದಲ್ಲಿಯೇ ಮೃತ ಪಟ್ಟರೆ, ಸತೀಶ್ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಇನ್ನು ಸಂದೀಪ್ ಕುಲಾಲ್ ಅವರು ಬೆಳ್ಮಣ್ ಜೆ ಸಿ ಸಂಸ್ಥೆಯಲ್ಲಿ ಕೋಶಾಧಿಕಾರಿಯಾಗಿ ಮತ್ತು ಜೂನಿಯರ್ ಜೆಸಿಯಾಗಿ ಉತ್ತಮ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.