ಕಾಲಕಾಲಕ್ಕೆ ಸಾಂಕ್ರಾಮಿಕ ವಲ್ಲದ ರೋಗಗಳ ತಪಾಸಣೆ ಮಾಡಿಸಿಕೊಳ್ಳಬೇಕು

ಚಿತ್ರದುರ್ಗ.ಜೂ.೨೦; ಇತ್ತೀಚಿನ ದಿನಗಳಲ್ಲಿ ಸಾಂಕ್ರಾಮಿಕ ವಲ್ಲದ ರೋಗಗಳಾದ ರಕ್ತ ಒತ್ತಡ, ಮಧುಮೇಹ, ಕ್ಯಾನ್ಸರ್, ಬೊಜ್ಜು ಇತರ ಜೀವನ ಶೈಲಿ ರೋಗಗಳು ಹೆಚ್ಚು ಹೆಚ್ಚು ಭಾದಿಸುತ್ತಿವೆ. ಆದ್ದರಿಂದ ಕಾಲಕಾಲಕ್ಕೆ ಸಾಂಕ್ರಾಮಿಕ ವಲ್ಲದ ರೋಗಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು.ಚಿತ್ರದುರ್ಗ ತಾಲ್ಲೂಕಿನ ಕುರುಬರಹಳ್ಳಿ ಸರ್ಕಾರಿ ಶಾಲಾ ಅವರಣದಲ್ಲಿ  ಆರೋಗ್ಯ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಚಿಕಿತ್ಸೆ, ಸಾಂಕ್ರಾಮಿಕ ವಲ್ಲದ ರೋಗಗಳ ತಪಾಸಣೆ, ಸ್ತ್ರೀರೋಗ ತಜ್ಞರಿಂದ ಬಂಜೆತನ ಪರೀಕ್ಷೆ , ಐವಿಆರ್‍ಎಫ್ ಚಿಕಿತ್ಸೆ ಬಗ್ಗೆ ಮಾಹಿತಿ ಹಾಗೂ ಶಿಕ್ಷಣ ಸಂವಹನದ ಕುರಿತು ಅವರು ಮಾತನಾಡಿದರು.ರಾಷ್ಟ್ರೀಯ ಸಾಂಕ್ರಾಮಿಕ ವಲ್ಲದ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಪ್ರತಿ ಆರೋಗ್ಯ ಕ್ಷೇಮ ಉಪಕೇಂದ್ರಗಳ ಹಂತದಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸಮೀಕ್ಷೆ ನಡೆಸಿ. 30 ವರ್ಷ ಮೇಲ್ಪಟ್ಟವರಿಗೆ ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ರೋಗಗಳ ತಪಾಸಣೆ, ಚಿಕಿತ್ಸೆ ಪ್ರಯೋಗಾಲಯ ಪರೀಕ್ಷೆಗಳನ್ನು ಗುಣಮಟ್ಟದ ಜೀವನ ಶೈಲಿಯ ಆಹಾರ ಶೈಲಿ ನಡೆಸಲು ಕಾರ್ಯಕ್ರಮ ವಿನ್ಯಾಸಗೊಳಿಸಲಾಗಿದೆ. ಈ ದಿನ ಜ್ಞಾನವಿಕಾಸ ಸೇವೆಯ ನೂರಾರು ಸದಸ್ಯರಿಗೆ ತಪಾಸಣೆ ನಡೆಸಲಾಗುತ್ತಿದೆ ಎಂದರು.