ಕಾಲಾವಕಾಶಕ್ಕೆ ಅಪ್ಪ-ಮಗ ಮೊರೆ

ಹಾಸನ,ಮೇ ೧-ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿದೆ. ಇದರ ಬೆನ್ನಲ್ಲೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ಎಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ವಿಶೇಷ ತನಿಖಾ ತಂಡ ನೋಟಿಸ್ ಜಾರಿ ಮಾಡಿದೆ.
ತಕ್ಷಣ ವಿಚಾರಣೆಗೆ ಹಾಜರಾಗದಿದ್ದರೆ ಕಾನೂನು ಕ್ರಮಕೈಗೊಳ್ಳುವುದಾಗಿಯೂ ಎಸ್‌ಐಟಿ ಎಚ್ಚರಿಕೆ ನೀಡಿದೆ.
ಮಾಜಿ ಸಚಿವ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ದ ಅಧಿಕಾರಿಗಳು ಆರೋಪಿಗಳಿಬ್ಬರ ಹೊಳೆನರಸೀಪುರದ ಮನೆಯ ಬಾಗಿಲಿಗೆ ನೊಟೀಸ್ ಅನ್ನು ಅಂಟಿಸಿದ್ದಾರೆ.
ಪುತ್ರ ಪ್ರಜ್ವಲ್ ಜರ್ಮನಿಗೆ ತೆರಳಿದ್ದು, ಮಾಜಿ ಸಚಿವ ರೇವಣ್ಣ, ಪ್ರಕರಣ ದಾಖಲಾಗುತ್ತಿದ್ದಂತೆ ದೇವರ ಮೊರೆ ಹೋಗಿದ್ದು, ಬೆಳಿಗ್ಗೆಯಿಂದಲೇ ಹೋಮ-ಹವನದಲ್ಲಿ ನಿರತರಾಗಿದ್ದಾರೆ.ಹೊಳೆನರಸೀಪುರ ದೇವಾಲಯಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮೇ ೪ ರಂದು ಎಸ್‌ಐಟಿ ಅಧಿಕಾರಿಗಳ ಮುಂದೆ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಹೀಗಾಗಿ ಪ್ರಜ್ವಲ್ ಮತ್ತು ಎಚ್.ಡಿ ರೇವಣ್ಣ ವಿಚಾರಣೆಗೆ ಕಾಲಾವಕಾಶ ಕೇಳಿರುವುದು ದಟ್ಟವಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಪ್ರಜ್ವಲ್ ರೇವಣ್ಣ ಜರ್ಮನಿಗೆ ತೆರಳಿದ್ದು, ಎಚ್‌ಡಿ ರೇವಣ್ಣ ಅವರು ಉತ್ತರ ಕರ್ನಾಟಕದ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ನೋಟೀಸ್ ಜಾರಿ ಮಾಡಿದ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿರುವ ಬೆನ್ನಲ್ಲೇ ಕಾನೂನು ಹೋರಾಟ ನಡೆಸಲು ವಕೀಲರೊಂದಿಗೆ ಹೆಚ್.ಡಿ. ರೇವಣ್ಣ ಅವರು ಸತತ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜ್ವಲ್ ರೇವಣ್ಣ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ತನಿಖೆಗಾಗಿ ಕಾಂಗ್ರೆಸ್ ಎಸ್‌ಐಟಿ ರಚಿಸಿದ ನಂತರ ಜೆಡಿಎಸ್ ಅವರನ್ನು ಅಮಾನತುಗೊಳಿಸಿದ ಒಂದು ದಿನದ ನಂತರ ತಂದೆ-ಮಗನ ವಿರುದ್ಧ ಸಮನ್ಸ್ ಜಾರಿ ಮಾಡಲಾಗಿದೆ. ಆದರೆ ಪ್ರಜ್ವಲ ರೇವಣ್ಣ ಜರ್ಮನಿಗೆ ತೆರಳಿರುವುದರಿಂದ ಇಂದು ವಿಚಾರಣೆಗೆ ಹಾಜರಾಗುತ್ತಿಲ್ಲ.
ಜರ್ಮನಿಯಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಈ ಹಿನ್ನೆಲೆಯಲ್ಲಿ ಅವರು ಕಾನೂನು ಮೊರೆ ಹೋಗಲಿದ್ದಾರೆ ವಿಚಾರಣೆಗೆ ಹಾಜರಾಗಲು ವಕೀಲರ ಮೂಲಕ ಕಾಲಾವಕಾಶ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜರ್ಮನಿಯಲ್ಲಿರುವ ಕಾರಣ ಇಂದು ಅವರಿಗೆ ಬರಲು ಸಾಧ್ಯವಾಗುವುದಿಲ್ಲ ಹಾಗಾಗಿ ಅವರ ವಕೀಲರ ಮೂಲಕ ಕಾಲಾವಕಾಶ ಕೇಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮನೆ ಕೆಲಸದವರು ನೀಡಿದ ದೂರಿನ ಮೇರೆಗೆ ಪ್ರಜ್ವಲ್ ಮತ್ತು ಅವರ ತಂದೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ದೂರಿನ ನಂತರ, ತಂದೆ-ಮಗನ ವಿರುದ್ಧ ಲೈಂಗಿಕ ಕಿರುಕುಳ, ಹಿಂಬಾಲಿಸುವುದು, ಬೆದರಿಕೆ ಮತ್ತು ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಸ್ಥಳ ಮಹಜರು:
ಹೊಳೆನರಸೀಪುರದಲ್ಲಿರುವ ಎಸ್‌ಐಟಿ ಅಧಿಕಾರಿಗಳು ದೂರು ನೀಡಿದ್ದ ಸಂತ್ರಸ್ತ ಮಹಿಳೆಯ ಸಮ್ಮುಖದಲ್ಲಿ ಸ್ಥಳ ಮಹಜರ್ ನಡೆಸಲಿದ್ದಾರೆ.ಹೊಳೆನರಸೀಪುರದ ಎಚ್‌ಡಿ ರೇವಣ್ಣ ಮನೆಯಲ್ಲಿ ಕೂಡ ಮಹಜರು ನಡೆಸಲು ಮುಂದಾಗಿದ್ದಾರೆ. ತಾನು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ರೇವಣ್ಣ ಲೈಂಗಿಕ ಕಿರುಕುಳ ನೀಡಿದ್ದಾಗಿ ಮಹಿಳೆ ದೂರು ನೀಡಿದ್ದರು.
ಲೈಂಗಿಕ ಕಿರುಕುಳ ಸಂಬಂಧ
ಹೊಳೆನರಸೀಪುರ ನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ಬಳಿಕ ಪ್ರಕರಣವನ್ನು ಸರ್ಕಾರ ಎಸ್‌ಐಟಿಗೆ ವಹಿಸಿತ್ತು. ನಿನ್ನೆ ಮಹಿಳೆಯ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿಕೊಂಡಿದೆ. ಇಂದು ಖುದ್ದು ಮಹಿಳೆ ಸಮ್ಮುಖದಲ್ಲಿ ಸ್ಥಳ ಮಹಜರು ಮಾಡಲು ಮುಂದಾಗಿದ್ದಾರೆ.
ಪ್ರಜ್ವಲ್‌ಗೆ ನೋಟಿಸ್ :
ಪ್ರಜ್ವಲ್ ಸದ್ಯ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದು, ಎರಡು ತಿಂಗಳ ಪ್ರವಾಸಿ ವೀಸಾದಲ್ಲಿ ತೆರಳಿದ್ದಾರೆ.
ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಮೊದಲ ಆರೋಪಿ ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಹೇಳಿಕೆ ಇಲ್ಲಿ ಅಗತ್ಯವಿದೆ. ಆದರೆ ಪ್ರಜ್ವಲ್ ರೇವಣ್ಣಗೆ ನೊಟೀಸ್ ಕೊಟ್ಟು ಕರೆಸಿಕೊಳ್ಳಲು ಫ್ರಾಂಕ್‌ಫರ್ಟ್ ಟ್ರೀಟಿ ಏನು ಹೇಳುತ್ತದೆ ಎಂದು ತಿಳಿಯಬೇಕಿದೆ.ತೀವ್ರಗತಿಯಲ್ಲಿ ಸಾಗುತ್ತಿರುವ ತನಿಖೆ ಪ್ರಜ್ವಲ್ ಗೈರುಹಾಜರಿಯಿಂದಾಗಿ ವಿಳಂಬವಾಗುವ ಸಾಧ್ಯತೆ ಇದೆ. ಚುನಾವಣೆ ಬಿಸಿ ಮುಗಿದ ನಂತರ ಹಳ್ಳ ಹಿಡಿಯಲೂಬಹುದು. ಆದರೆ ಒಬ್ಬ ಸಂಸತ್ ಸದಸ್ಯ ತಲೆ ತಪ್ಪಿಸಿಕೊಂಡಿದ್ದಾರೆಂದರೆ ಕ್ಷೇತ್ರಕ್ಕೆ, ಪಕ್ಷಕ್ಕೆ ಹಾಗೂ ಇಡೀ ರಾಜ್ಯಕ್ಕೆ ಮುಜುಗರದ ಸಂಗತಿಯಾಗಿದೆ.
ಲುಕ್ ಔಟ್ ನೊಟೀಸ್:
ಅರೋಪಿಗಾಗಿ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ. ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಹಾಗೂ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು ಸಿಆರ್ ಪಿಸಿ ೧೬೪ ಅಡಿಯಲ್ಲಿ ಹೇಳಿಕೆ ಪಡೆಯಲಿದೆ.

ಮೇ ೩ಕ್ಕೆ ಪ್ರಜ್ವಲ್ ಬೆಂಗಳೂರಿಗೆ
ರಾಜ್ಯ ರಾಜಕೀಯದಲ್ಲಿ ಅತೀವ ಕೋಲಾಹಲ ಸೃಷ್ಟಿಸಿರುವ ಪೆನ್‌ಡ್ರೈವ್ ಪ್ರಕರಣದ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಮೇ ೩ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ.
ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿ ಪ್ರವಾಸದಲ್ಲಿರುವ ಪ್ರಜ್ವಲ್ಲು ಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ ೩ರ ಪ್ರಯಾಣಕ್ಕೆ ಪ್ರಜ್ವಲ್ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮೇ ೩ ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸುವ ಪ್ರಜ್ವಲ್ ಮೇ ೪ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (ಎಸ್ ಐಟಿ) ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್ ವೀಸಾವನ್ನು ಅವರು ಹೊಂದಿದ್ದಾರೆ. ಪ್ರವಾಸಸಿ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ ೯೦ ದಿನಗಳ ಕಾಲ ಚಾಲೂ ಇರುತ್ತದೆ. ಸಿಆರ್ ಪಿಸಿ೪೧ಂ ಸೆಕ್ಷನ್ ಪ್ರಕಾರ, ಅವರು ನೋಟೀಸ್‌ಗೆ ಸ್ಪಂದಿಸಿ ಹಾಜರಾಗದಿದ್ದರೆ ಅವರನ್ನು ಬಂಧಿಸಬಹುದಾಗಿದೆ.