ಕಾಲು ಜಾರಿ ಚೆಕ್ ಡ್ಯಾಂ ಹೊಂಡಕ್ಕೆ ಬಿದ್ದು ಯುವಕ ಸಾವು

ಕೊಟ್ಟೂರು ಜೂ 03 : ತಾಲೂಕಿನ ನಾಗರಕಟ್ಟೆ ಗ್ರಾಮದ ಬಳಿಯ ಚೆಕ್ ಡ್ಯಾಂ ಹೊಂಡದಲ್ಲಿ ಬಿದ್ದು ಯುವಕ ಸಾವನ್ನಪ್ಪಿದ್ದ ಘಟನೆ ಇಂದು ನಡೆದಿದೆ.

ಹಾಲೇಶ(29) ಮೃತ ದುರ್ದೈವಿ. ಹಳ್ಳದಲ್ಲಿ ಚೆಕ್ ಡ್ಯಾಂ ನಿರ್ಮಿಸಲಾಗಿತ್ತು.ಬಹಿರ್ದೆಶೆ ಮುಗಿಸಿ ನೀರಿನಿಂದ ತೊಳೆದು ಕೊಳ್ಳಲು ಹೊದಾಗ
ಹೋದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪಿಎಸ್ಐ ನಾಗಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.