ಕಾಲೇಜು ಅಭಿವೃದ್ಧಿಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಮುಖ್ಯ

ದಾವಣಗೆರೆ.ಜೂ.೨೭:  ಕಾಲೇಜಿನಿಂದ   ಪದವಿ ಪಡೆದು ಹೊರ ಹೋಗಿ ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರುವ ವಿದ್ಯಾರ್ಥಿಗಳು ಕಾಲೇಜು ಅಭಿವೃದ್ಧಿಯಲ್ಲಿ ಹಾಗೂ ಪ್ರಸ್ತುತ ವಿದ್ಯಾರ್ಥಿಗಳ ಭವಿಷ್ಯ. ರೂಪಿಸುವಲ್ಲಿ   ಬಹು ಮುಖ್ಯ ಪಾತ್ರ ವಹಿಸಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್ ಬಾಬು  ಹೇಳಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿನಿಯರು ಕಾಲೇಜಿಂದ ಹೊರಹೋದ ನಂತರ ಸಾಮಾಜಿಕವಾಗಿ ಬೆಳವಣಿಗೆಯಾಗುತ್ತಾರೆ ಆ ಬೆಳವಣಿಗೆ ನಂತರ ಸಾಮಾಜಿಕ ಹೊಣೆಗಾರಿಕೆ ನಮ್ಮದು ಎಂಬ ಧನಾತ್ಮಕ ಚಿಂತನೆಯಿಂದ ಕಾಲೇಜಿನ ಅಭಿವೃದ್ಧಿ ಕಡೆಗೆ ಮುಖ ಮಾಡಿದರೆ ಕಾಲೇಜುಗಳು ಅಭಿವೃದ್ಧಿಯಾಗಲು ಸಾಧ್ಯ. ಪ್ರತಿಯೊಬ್ಬರು ದೇಶಕ್ಕಾಗಿ ನಾವೇನು ಕೊಡುಗೆ ನೀಡಿದ್ದೇವೆ ಎನ್ನುವುದನ್ನು ಅರ್ಥೈಸಿಕೊಂಡು ದೇಶಕ್ಕೆ ಕೊಡುಗೆಯ ರೂಪದಲ್ಲಿ ಕಾಲೇಜಿನ ಅಭಿವೃದ್ಧಿಯತ್ತ ಗಮನ ಹರಿಸಿದರೆ ಕಾಲೆಜುಗಳು ವೃದ್ಧಿಯಾಗಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿನಿಯರು ಆಲೋಚಿಸುವ ಅಗತ್ಯ ಇದೆ ಎಂದು ಹೇಳಿದರು.ಪದವಿ ಪಡೆದ ನಂತರ  ನಮಗೆ ಯಾರಾದರೂ ಸಹಾಯ ಮಾಡುತ್ತಾರೆ ಯಾರಿಂದಲಾದರೂ ನಾವು ಮೇಲೆ ಬರುತ್ತೇವೆ ಎಂಬ ಕಲ್ಪನೆಯಲ್ಲಿ ವಿದ್ಯಾರ್ಥಿಗಳು ಸಮಯ ವ್ಯರ್ಥ ಮಾಡದೇ ನಮಗೆ ನಾವೇ ಗುರುಗಳಾಗಿ ಜೀವನನ್ನು ರೂಪಿಸುವಲ್ಲಿ ತಲ್ಲಿನರಾಗಬೇಕು ಜೀವನ ರೂಪಗೊಂಡ ನಂತರ ನಾವು ಓದಿದ ಕಾಲೇಜಿಗೆ ಮತ್ತು ಅಲ್ಲಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕೆಲಸವನ್ನು ಮಾಡಿದಾಗ ಕಾಲೇಜುಗಳು ಉನ್ನತ ಮಟ್ಟದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.