
ಹುಳಿಯಾರು, ಆ. ೧೨- ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ರಚನೆಗೊಂಡ ಕಾಲೇಜು ಅಭಿವೃದ್ಧಿ ಸಮಿತಿಯ ೨೦೨೩-೨೪ ನೇ ಸಾಲಿನ ಮೊದಲ ಸಭೆ ನಡೆಯಿತು.
ಶಾಸಕ ಸಿ.ಬಿ.ಸುರೇಶ್‌ಬಾಬು ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಬಿದ್ದು ಹೋಗಿರುವ ಕಾಲೇಜಿನ ಕಾಂಪೌಂಡ್ ದುರಸ್ಥಿ ಮಾಡಿಕೊಡುವ ಬಗ್ಗೆ ಶಾಸಕರು ಭರವಸೆ ನೀಡಿದರು.
ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಬಗ್ಗೆ ಮಾಹಿತಿ ಪಡೆದು ನಂತರ ಕಾಲೇಜಿನ ಸಮಸ್ಯೆಗಳ ಬಗ್ಗೆ ಸುದೀರ್ಘಕಾಲ ಚರ್ಚೆ ನಡೆಸಿ ಕಾಲೇಜಿಗೆ ಬೇಕಾಗಿರುವ ಮೂಲಭೂತ ಸೌಕರ್ಯ ಒದಗಿಸುವುದಾಗಿ ತಿಳಿಸಲಾಯಿತು.
ಸಭೆಯಲ್ಲಿ ಪ್ರಾಚಾರ್ಯ ಸಿ.ಬಿ.ಪರಮೇಶ್ವರಪ್ಪ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಚ್.ಡಿ.ಶಂಕರಪ್ಪ, ಸದಸ್ಯರುಗಳಾದ ಎಚ್.ಡಿ.ಪ್ರಸಾದ್, ಡಿಶ್‌ಬಾಬು, ಸಹನ, ನಿವೃತ್ತ ಮುಖ್ಯ ಶಿಕ್ಷಕ ಪಿ.ಬಿ.ನಂದವಾಡಗಿ, ವಿದ್ಯಾರ್ಥಿ ಪ್ರತಿನಿಧಿ ಸಿ.ಎಲ್.ಚೈತ್ರ, ರಂಜಿತ ಮತ್ತಿತರರು ಉಪಸ್ಥಿತರಿದ್ದರು.