ಕಾಲೇಜು ಮೈದಾನದಲ್ಲಿ ತರಕಾರಿ ವ್ಯಾಪಾರಕ್ಕೆ ಅವಕಾಶ: ಪೋಲೀಸರಿಂದ ವ್ಯಾಪಾರಿಗಳಿಗೆ ತರಾಟೆ

ಲಿಂಗಸುಗೂರು : ಕೊರೊನಾ ಸೊಂಕು ವ್ಯಾಪಕವಾಗಿ ಹರಡುತ್ತಿದ್ದರಿಂದ ಶನಿವಾರ ಮತ್ತು ಭಾನುವಾರ ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ಪಟ್ಟಣದ ಸರ್ಕಾರಿ ಕಾಲೇಜು ಮೈದಾನದಲ್ಲಿ ತರಕಾರಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಶನಿವಾರ ವಾರದ ಸಂತೆ ರದ್ದುಗೊಳಿಸಲಾಗಿದೆ. ಮೇ ೪ ವರಿಗೆ ಮಧ್ಯಾಹ್ನ ೨ ರ ನಂತರ ಲಾಕ್ ಡೌನ್ ಜಾರಿ ಮಾಡಲಾಗಿದೆ. ದಿನದ ಅಗತ್ಯ ವಸ್ತುಗಳಿಗೆ ತೊಂದರೆಯಾಗದಂತೆ ತರಕಾರಿ ಹಾಗೂ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಬೀದಿ ಬದಿಯಲ್ಲಿ ತರಕಾರಿ ಮಾರಾಟ ನಿಷೇಧಿಸಲಾಗಿದೆ. ಕಾಲೇಜು ಮೈದಾನದಲ್ಲಿ ತರಕಾರಿ ಮಾರಾಟಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ. ಇದನ್ನು ಮೀರಿ ರಸ್ತೆಯ ಬದಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳಿಗೆ ಪುರಸಭೆ ಹಾಗೂ ಪೋಲಿಸರು ತರಾಟೆಗೆ ತೆಗೆದುಕೊಂಡರು.
ಶನಿವಾರ ಮತ್ತು ರವಿವಾರ ಲಾಕ್ ಡೌನ್ ಘೋಷಣೆ ಯಾಗಿದ್ದರಿಂದ ಪಟ್ಟಣದಲ್ಲಿ ಜನಜೀವನ ಸ್ತಬ್ಧ ವಾಗಿತ್ತು. ಲಾಕ್ ಡೌನ್ ಮೀರಿ ಹೊರಗೆ ಬಂದವರಿಗೆ ಪೋಲಿಸ್ ಬೆತ್ತದ ರುಚಿ ತೋರಿಸಿದರು.