
ಕರಾಚಿ,ಏ.೧-ಕಾರ್ಖಾನೆಯೊಂದರಲ್ಲಿ ಉಚಿತ ಪಡಿತರ ವಿತರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮಳೆಯರೂ ಸೇರಿದಂತೆ ಮೃತಪಟ್ಟವರ ಸಂಖ್ಯೆ ೧೨ ದಾಟಿದೆ. ಹಲವು ಮಂದಿ ಸ್ಥಿತಿ ಚಿಂತಾಜನಕವಾಗಿರುವ ಘಟನೆ ನಡೆದಿದೆ.
ಕರಾಚಿಯ ನೌರಸ್ ಕ್ರಾಸ್‌ರೋಡ್ಸ್ ಬಳಿಯ ಕಾರ್ಖಾನೆಯೊಳಗೆ ಉಚಿತ ಆಹಾರ ಪದಾರ್ಥ ಪಡೆಯಲು ಪ್ರಯತ್ನಿಸುತ್ತಿರುವಾಗ ಜನರು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟ ೧೨ ಮಂದಿಯಲ್ಲಿ ಮೂವರು ಮಕ್ಕಳು ಮತ್ತು ೯ ಮಹಿಳೆಯರೂ ಸೇರಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೆ, ಕಾಲ್ತುಳಿತದ ಸಮಯದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಡಿತರ ವಿತರಣೆ ವೇಳೆ ಸ್ಥಳದಲ್ಲಿ ಸಾಕಷ್ಟು ಜನ ಜಮಾಯಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ಅಧಿಕಾರಿಗಳ ಪ್ರಕಾರ, ಕಾರ್ಖಾನೆಯಲ್ಲಿ ಪೆಟ್ರೋಲ್ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡ ಅನಾಹುತಕ್ಕೆ ಕಾರಣವಾಗಿದೆ ಎನ್ನಲಾಗಿದೆ
ಕಿರಿದಾದ ಬೀದಿಗಳಲ್ಲಿ ನೀರು ತರುವುದು ಕಷ್ಟವಾದ ಹಿನ್ನೆಲೆಯಲ್ಲಿ ಕಾರ್ಖಾನೆಯ ಕೆಲಸಗಾರರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು ಎಂದು ಹೇಳಿದ್ದಾರೆ.
ಮೇಲಾಗಿ ಕಾರ್ಖಾನೆಯ ನೌಕರರು ಝಕಾತ್ ಅಥವಾ ಪಡಿತರ ವಿತರಣೆ ಬಗ್ಗೆ ಮಾಹಿತಿ ನೀಡಿಲ್ಲ, ಇಲ್ಲದಿದ್ದರೆ ಸೂಕ್ತ ವ್ಯವಸ್ಥೆ ಮಾಡುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ರಕ್ಷಣಾ ತಂಡಗಳು ಮೃತದೇಹಗಳನ್ನು ಮತ್ತು ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿವೆ. ಹಲವಾರು ಮಂದಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.