ಕಾಳಗಿ ತಹಶೀಲ್ದಾರ ಕಚೇರಿಯಲ್ಲಿ ಡಿ.ಸಿ.ಯಶವಂತ ವಿ.ಗುರುಕರ್ ಉಪಸ್ಥಿತಿ;ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಆಲಿಕೆ

ಕಲಬುರಗಿ,ಜು.25; ಇದೇ ಜುಲೈ 28 ರಂದು (ಗುರುವಾರ ) ಕಾಳಗಿ ತಹಶೀಲ್ದಾರ ಕಛೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಉಪಸ್ಥಿತರಿದ್ದು, ತಾಲೂಕಿನ ಜನತೆಯ ಕುಂದುಕೊರತೆಗಳ ಅಹವಾಲು ಆಲಿಸಲಿದ್ದಾರೆ.
ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಜುಲೈ 26 ರಂದು ಮಂಗಳವಾರ ಕಾರ್ಯಕ್ರಮ ನಿಗದಿಯಾಗಿತ್ತಾದರು, ಅಂದು ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಪ್ರವಾಸ ಹಿನ್ನೆಲೆಯಲ್ಲಿ ಅಹವಾಲು ಆಲಿಕೆಯನ್ನು ಜು.28ಕ್ಕೆ ಮುಂದೂಡಲಾಗಿದೆ.
ಜು.28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಕಾಳಗಿ ತಹಶೀಲ್ದಾರ ಕಚೇರಿಗೆ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಡಿ.ಸಿ. ಯಶವಂತ ವಿ. ಗುರುಕರ್ ಅವರು ಮನವಿ ಮಾಡಿಕೊಂಡಿದ್ದಾರೆ.