ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ ತಡೆಗೆ ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ

ಬೆಂಗಳೂರು, ಮೇ 4- ರಾಜ್ಯದಲ್ಲಿರೆ ಮಿಡಿಸ್ವಿಯರ್ ಇಂಜೆಕ್ಷನ್ ಕೊರತೆಯಾಗುತ್ತಿದೆ. ಅಲ್ಲದೇ ಕಾಳಸಂತೆಯಲ್ಲಿ ಇದು ಮಾರಾಟವಾಗುತ್ತಿದ್ದು, ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ರಾಜ್ಯದಲ್ಲಿ ರೆಮಿಡಿಸಿವಿರ್ ಬ್ಲಾಕ್ ಮಾರಾಟದ ಬಗ್ಗೆ ನಿಗಾವಹಿಸುವಂತೆ ಸೂಚಿಸಿದ್ದಾರೆ

ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿದೆ. ಇದು ಅತ್ಯಂತ ಕ್ಲಿಷ್ಟಕರವಾದ ಸಂದರ್ಭ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಮ್ಮ ಜೊತೆಗೆ ನಿಂತಿದೆ. ಆದರೆ ಕೆಲ ಅಧಿಕಾರಿಗಳು ರೆಮಿಡಿಸಿವಿರ್ ಡೋಸ್‌ಗಳನ್ನು ಅನ್ಯ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೇನೆ. ಇದರಲ್ಲಿ ಯಾರನ್ನು ಕಾಪಾಡುವ ಮಾತಿಲ್ಲ. ನಾನು ಇದನ್ನು ತನಿಖೆಗೆ ವಹಿಸಿದರೇ, ಸತ್ಯ ಹೊರ ಬರುತ್ತದೆ.ಯಾವುದೇ ಅಧಿಕಾರಿಗಳು ಇದರಲ್ಲಿ ಭಾಗಿಯಾದ್ರೆ ಪರಿಣಾಮ ಭೀಕರವಾಗಿರಲಿದೆ. ಇದನ್ನೇ ಎಚ್ಚರಿಕೆ ಎಂದು ಭಾವಿಸಬೇಕು. ಮುಂದೆ ಜನರ ಸೇವೆ ಬದ್ಧರಾಗಿರಬೇಕು ಎಂದು ಯಡಿಯೂರಪ್ಪ ಕಟ್ಟಪ್ಪಣೆ ಮಾಡಿದ್ದಾರೆ.