ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ಪ್ರತಿಭಟನೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.24:- ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಉರುಳುಸೇವೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ ಹಾದು ಹೋಗಿರುª Àರಾಷ್ಟ್ರೀಯ ಹೆದ್ದಾರಿಯಲ್ಲಿ ಕರ್ನಾಟಕ ಸೇನಾ ಪಡೆಯಅಧ್ಯಕ್ಷಚಾ.ರಂ.ಶ್ರೀನಿವಾಸಗೌಡ, ಶಾ.ಮುರುಳಿ ಹಾಗೂ ಇನ್ನಿತರರುಅರೆ ಬೆತ್ತಲೆಯಾಗಿ ರಸ್ತೆಯಲ್ಲಿ ಉರುಳು ಸೇವೆ ಮಾಡಿ ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ, ಕೇಂದ್ರ ಸರ್ಕಾರದವಿರುದ್ದ ಧಿಕ್ಕಾರದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನ್ಯಾಯಾಧೀಕರಣ ತಮಿಳುನಾಡಿನ ಪರವಾಗಿಕಾರ್ಯ ನಿರ್ವಹಣೆ ಮಾಡುತ್ತಿದೆ, ರಾಜ್ಯ ಸರ್ಕಾರರೈತರ ಹಿತ ಬಲಿ ಕೊಡುತ್ತಿದೆ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದೇ ರಾಜ್ಯದಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕುಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿರಾಜು, ಚಾ.ರಾ.ಕುಮಾರ್, ಲಿಂಗರಾಜು, ಚಾ.ವೆಂ.ರಾಜಗೋಪಾಲ್, ಚಾ.ಹ.ರಾಮು, ಗು.ಪುರುμÉೂೀತ್ತಮ್, ತಾಂಡವಮೂರ್ತಿ, ಲಿಂಗರಾಜು, ಆಟೋ ನಾಗೇಶ್‍ಇತರರು ಭಾಗವಹಿಸಿದ್ದರು.