ಕಾವೇರಿ ನದಿ ವಿವಾದ: ಸೌಟು ಹಿಡಿದು ಪ್ರದರ್ಶಿಸಿ ಪ್ರತಿಭಟನೆ

ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.16:- ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಚಮಚ, ಸೌಟು ಹಿಡಿದು ಪ್ರದರ್ಶಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು
ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಚಮಚ, ಸೌಟು ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಕ್ರಮವನ್ನು ಖಂಡಿಸಿ ಇಂದಿಗೆ 32 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು. ಇಂದುಕೂಡಕೇಂದ್ರ ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿನಪರ ಚಮಚಗಿರಿ ಮಾಡುತ್ತಿದೆಎಂದು ಆರೋಪಿಸಿದರು.
ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ವೆಂ.ರಾಜ್ ಗೋಪಾಲ್, ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ್, ನಾಗಣ್ಣ ದೊಡ್ಡರಾಯಪೇಟೆ, ಮಿಮಿಕ್ರಿ ಮಲ್ಲಣ್ಣ, ರಾಜಪ್ಪ, ಲಿಂಗರಾಜು, ನಂಜುಂಡಸ್ವಾಮಿ, ಸೋಮವಾರಪೇಟೆ ಮಂಜು, ಇತರರು ಭಾಗವಹಿಸಿದ್ದರು.