ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.29:- ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲಿ ಕನ್ನಡ ಪರ ಹೋರಾಟಗಾರರು ಇಂದು 45ನೇ ದಿನದ ಪ್ರತಿಭಟನೆ ನಡೆಸಿದರು.
ನಿತ್ಯವೂ ವಿನೂತನವಾಗಿ ಪ್ರತಿಭಟಿಸುತ್ತಿರುವ ಕನ್ನಡಪರ ಹೋರಾಟಗಾರರು ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಚಾಮರಾಜೇಶ್ವರ ದೇವಾಲಯದಿಂದ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದತನಕ ಬಾಯಿಗೆ ಬೀಗ ಹಾಕಿಕೊಂಡು ಪ್ರತಿಭಟನಾರ್ಯಾಲಿ ನಡೆಸಿದರು.
ಬಾಯಿಗೆ ಬೀಗ ಹಾಕಿಕೊಂಡ ಪ್ರತಿಭಟನಾಕಾರರುರಸ್ತೆ ತಡೆದು ಆಕ್ರೋಶ ಹೊರಹಾಕಿದರು. ರೈತರ ಹಿತಕಾಯುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಬಾಯಿಗೆ ಬೀಗ ಹಾಕಿಕೊಂಡಿದೆ, ಮಧ್ಯಸ್ಥಿಕೆ ವಹಿಸಬೇಕಾದ ಕೇಂದ್ರ ಸರ್ಕಾರ ಬಾಯಿಗೆ ಬೀಗ ಹಾಕಿಕೊಂಡಿದೆ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಬಾಯಿಗೆ ಬೀಗ ಹಾಕಿಕೊಂಡಿದೆಎಂದು ಧಿಕ್ಕಾರದ ಘೋಷಣೆ ಕೂಗಿದರು.
ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವತನಕ ಪ್ರತಿಭಟನೆ ಮುಂದುವರೆಸುತ್ತೇವೆ, ಹೋರಾಟವನ್ನು ಉಗ್ರರೂಪಕ್ಕೆ ಹೋಗಲಿದೆಎಂದುಎಚ್ಚರಿಕೆಕೊಟ್ಟರು.
ಪ್ರತಿಭಟನೆಯಲ್ಲಿ ಕನ್ನಡ ಚಳವಳಿಗಾರರಾದ ಶಾ.ಮುರಳಿ, ಚಾ.ವೆಂ. ರಾಜಗೋಪಾಲ್, ಗು. ಪುರುಷೋತ್ತಮ್, ದೊಡ್ಡರಾಯಪೇಟೆ ಮಹೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.