(ಸಂಜೆವಾಣಿ ಪ್ರತಿನಿಧಿಯಿಂದ)
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗವು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕರ್ನಾಟಕ ಎದುರಿಸುತ್ತಿರುವ ಸಂಕಷ್ಟ ಸ್ಥಿತಿ ಬಗ್ಗೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ದೆಹಲಿಯಲ್ಲಿ ಗುರುವಾರ ವಿವರಿಸಿ, ಮನವಿ ಸಲ್ಲಿಸಿತು.ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಸಚಿವರಾದ ಎಚ್.ಸಿ. ಮಹದೇವಪ್ಪ, ಚಲುವರಾಯಸ್ವಾಮಿ, ಎಚ್. ಕೆ. ಪಾಟೀಲ್, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಗಳಾದ ಟಿ.ಬಿ.ಜಯಚಂದ್ರ, ಪ್ರಕಾಶ್ ಹುಕ್ಕೇರಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಇದ್ದಾರೆ.
ಬೆಂಗಳೂರು,ಸೆ.೨೧:ಕಾವೇರಿ ಸಂಕಷ್ಟ ಪರಿಸ್ಥಿತಿ ಬಗ್ಗೆ ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಎಲ್ಲವನ್ನೂ ವಿವರಿಸಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರನ್ನು ನವದೆಹಲಿಯಲ್ಲಿಂದು ಭೇಟಿ ಮಾಡಿದ ನಂತರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಕಾವೇರಿ ನೀರು ಹಂಚಿಕೆ ಸಂಬಂಧ ಕೇಂದ್ರದ ಜಲಸಚಿವರ ಜತೆ ಚಚೆ ನಡೆಸಿದೆವು. ಸದ್ಯಕ್ಕೆ ಕೇಂದ್ರ ಸಚಿವರು ಸಕರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದರು.
ನಮ್ಮ ಸಂಕಷ್ಟದ ಪರಿಸ್ಥಿತಿಂiiನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕರಾತ್ಮಕವಾಗಿತ್ತು. ಸುಪ್ರೀಂಕೋರ್ಟ್‌ನಲ್ಲೂ ನಮ್ಮ ಮನವಿ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ನಮ್ಮ ಮನವಿಯನ್ನು ಪುರಸ್ಕರಿಸಿ ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶಕ್ಕೆ ತಡೆಯಾಜಎ ನೀಡುವ ಭರವಸೆ ಇದೆ ಎಂದರು.
ಕಾವೇರಿ ವಿಚಾರದ ಸಂಬಂಧ ಪ್ರಧಾನಿಯವರನ್ನು ಭೇಟಿ ಮಾಡಲು ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಮಾಡುತ್ತೇವೆ. ನಾಲ್ಕು ರಾಜ್ಯದವರನ್ನು ಕರೆಸಿ ಮಾತನಾಡುವಂತೆ ಪ್ರಧಾನಿಯವರಿಗೆ ಮನವಿ ಮಾಡುತ್ತೇವೆ ಎಂದು ಅವರು ಹೇಳಿದರು.
ನಮ್ಮ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ ೧೦೬ ಟಿಎಂಸಿ ನೀರು ಅಗತ್ಯವಿದೆ. ಆದರೆ, ನಮ್ಮ ೪ ಜಲಾಶಯಗಳಿಂದ ಕೇವಲ ೫೧ ಟಿಎಂಸಿ ನೀರು ಇದೆ ಎಂಬುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ್ದೇವೆ ಎಂದರು.
ನೀರು ಬಿಡುವುದಕ್ಕೆ ನಮ್ಮ ಬಳಿ ನೀರು ಇಲ್ಲ ಎಂಬುದನ್ನು ಹೇಳಿದ್ದೇವೆ. ಹಾಗೆಯೇ ನಮ್ಮ ಕಾನೂನು ತಂಡ ಸುಪ್ರೀಂಕೋರ್ಟ್‌ಗೂ ವಸ್ತುಸ್ಥಿತಿಯನ್ನು ಮನವರಿಕೆ ಮಾಡಲು ಯತ್ನಿಸುತ್ತಿದೆ ಎಂದರು.