ಕಾಶ್ಮೀರಕ್ಕೆ ಹೊಸ ಸಂಸತ್ ಘೋಷಿಸಿ: ಸುಪ್ರೀಂ

ನವದೆಹಲಿ,ಸೆ.೬- ಜಮ್ಮು ಕಾಶ್ಮೀರಕ್ಕಾಗಿ ದೇಶದ ಸಂಸತ್ ಹೊಸ ಕಾನೂನು ಜಾರಿ ಮಾಡಲಿ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕಣಿವೆ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ತಂಡವಾಗಿ ೧೬ ದಿನಗಳ ಕಾಲ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಚಾರಣೆ ಕೊನ ದಿನ ಈ ಅಭಿಪ್ರಾಯ ವ್ಯಕ್ತಪಡಿಸಿ ತೀರ್ಪು ಕಾಯ್ದಿರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ ಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸುಪ್ರೀಂ ಕೋರ್ಟ್ ಪೀಠ, ೨೦೧೯ ರಲ್ಲಿ ವಿಚಾರಣೆಯ ನಂತರ ಆರ್ಟಿಕಲ್ ೩೭೦ ರದ್ದುಗೊಳಿಸುವ ಮತ್ತು ಜಮ್ಮು ಮತ್ತು ಕಾಶ್ಮೀರ ವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕುರಿತು ವಾದ-ಪ್ರತಿವಾದ ಮುಕ್ತಾಯಗೊಳಿದೆ.

ಅರ್ಜಿದಾರರ ವಕೀಲರಾದ ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ರಾಜೀವ್ ಧವನ್, ಜಾಫರ್ ಮೊಹಮ್ಮದ್ ಶಾ ಮತ್ತು ದುಶ್ಯಂತ್ ದವೆ ವಾದ ಮಂಡಿಸಿದ್ದರು.

ಆರ್ಟಿಕಲ್ ೩೭೦ ರ ಅಡಿಯಲ್ಲಿ ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ಸುಮಾರು ೭೦ ವರ್ಷಗಳಷ್ಟು ಹಳೆಯ ವಿಶೇಷ ಸ್ಥಾನಮಾನ ರದ್ದುಗೊಳಿಸುವ ಕೇಂದ್ರದ ೨೦೧೯ ರ ನಿರ್ಧಾರಗಳ ಸಿಂಧುತ್ವ ಪ್ರಶ್ನಿಸಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಸಲ್ಲಿಸಿದ ಎರಡು ಅರ್ಜಿಗಳನ್ನು ಒಳಗೊಂಡಂತೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿದೆ.

ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ, ವಿ ಗಿರಿ, ಮಹೇಶ್ ಜೇಠ್ಮಲಾನಿ ಮತ್ತು ಗುರು ಕೃಷ್ಣ ಕುಮಾರ್ ಮತ್ತು ಇತರರ ಮೂಲಕ ಕೇಂದ್ರ ಸರ್ಕಾರದ ಕ್ರಮ ಸಮರ್ಥಿಸಿಕೊಂಡಿದ್ದಾರೆ.