ಕಾಸರಗೋಡು ಜಿಲ್ಲೆಯಲ್ಲಿ ನಿನ್ನೆ 432 ಮಂದಿಯಲ್ಲಿ ಕೊರೋನಾ ಪಾಸಿಟಿವ್

ಕಾಸರಗೋಡು, ಅ.8- ಜಿಲ್ಲೆಯಲ್ಲಿ ನಿನ್ನೆ 432 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಪೈಕಿ 417 ಮಂದಿಗೆ ಸಂಪರ್ಕದಿಂದ ಸೋಂಕು ತಗುಲಿದೆ.
ಇನ್ನು ನಿನ್ನೆ 170 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿದ್ದಾರೆ. ಹತ್ತು ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ಪತ್ತೆಯಾಗಿದೆ. ಇನ್ನು ಕೇರಳದಲ್ಲಿ ಇದೇ ಮೊದಲ ಬಾರಿ ಒಂದೇ ದಿನ ಸೋಂಕಿತರ ಸಂಖ್ಯೆ 10 ಸಾವಿರ ದಾಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 10, 606ಕ್ಕೆ ಏರಿಕೆಯಾಗಿದೆ.