ಕಿಟ್ಟಾ ಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ

ಬಸವಕಲ್ಯಾಣ:ಎ.13: ಸಾರ್ವತ್ರಿಕ ವಿಧಾನಸಭೆ ಚುನಾವಣೆ ಅಂಗವಾಗಿ ಸೋಮವಾರ ತಾಲೂಕಿನ ಕಿಟ್ಟಾ ಗ್ರಾಮದಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು. ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಕಿಟ್ಟಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ ಮಿಲೀಂದಕರ್ ಅವರು ಚಾಲನೆ ನೀಡಿದರು.

ನಂತರ ಬ್ಯಾನರ್ ಹಾಗೂ ಸ್ಲೋಘದೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಲಾಯಿತು. ರಸ್ತೆ ಉದ್ದಕ್ಕೂ ಮೇ.10 ರಂದು ನಡೆಯುವ ಮತದಾನದಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಸಾರ್ವಜನಿರಲ್ಲಿ ಅರಿವು ಮೂಡಿಸಿ ತಿಳಿಸಲಾಯಿತು. ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ವೀರಾರೆಡ್ಡಿ, ಡಿಇಒ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಇದ್ದರು