ಕಿಡಿಗೇಡಿಗಳ ಕಲ್ಲು ತೂರಾಟ: ಬಾಗಲಕೋಟೆಯಲ್ಲಿ ಕೆಎಸ್ ಆರ್ ಟಿಸಿ ಚಾಲಕ ಸಾವು

ಬಾಗಲಕೋಟೆ , ಏ 16-ಸಾರಿಗೆ ನೌಕರರ ಮುಷ್ಕರ ಮುಂದುವರೆದಿರುವ ನಡುವೆಯೂ ಕುಟುಂಬಕ್ಕೆ ಆಧಾರವಾಗಿದ್ದ ಚಾಲಕ ಹಿರಿಯ ಅಧಿಕಾರಿಗಳ ಕಟ್ಟುನಿಟ್ಟಿನ ಸೂಚನೆ ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಪ್ರಮಾಣ ಪತ್ರ ಸಲ್ಲಿಸಿ ಕರ್ತವ್ಯಕ್ಕೆ ಹಾಜರಾಗಿದ್ದರು. ಆದರೆ, ಕೆಲ ಕಿಡಿಗೇಡಿಗಳು ಬಸ್ಸಿಗೆ ಕಲ್ಲು ತೂರಿದ್ದರಿಂದ ತೀವ್ರವಾಗಿ ಗಾಯಗೊಂಡ ಚಾಲಕ ಬಲಿಯಾಗಿದ್ದಾರೆ.
ಕಿಡಿಗೇಡಿಗಳ ದುಷ್ಕೃತ್ಯಕ್ಕೆ ರಾಜ್ಯದಲ್ಲಿ ಕೆಎಸ್​ಆರ್​ಟಿಸಿ ಚಾಲಕನೋರ್ವನ ಬಲಿಯಾಗಿರು ಮನಕಲಕುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ಜಮಖಂಡಿ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 55 ವರ್ಷದ ಎನ್ ಕೆ ಅವಟಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇಂದು
ಕರ್ತವ್ಯಕ್ಕೆಂದು ಹಾಜರಾಗಿ ಜಮಖಂಡಿಯಿಂದ ಘತ್ತರಗಾಕ್ಕೆ ಹೋಗಿ ವಿಜಯಪುರ ಮಾರ್ಗವಾಗಿ ವಾಪಸ್ ಜಮಖಂಡಿ ನಗರಕ್ಕೆ ಬರುವ ವೇಳೆ ಕವಟಗಿ ಪುನರ್ವಸತಿ ಕೇಂದ್ರದ ಬಳಿ ಕಿಡಿಗೇಡಿಗಳು ಬಸ್ ಗೆ ಏಕಾಏಕಿ ಕಲ್ಲು ತೂರಿದ್ದಾರೆ. ಕಲ್ಲು ನೇರವಾಗಿ ಚಾಲಕ ಎನ್ ಕೆ ಅವಟಿ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದ ಪರಿಣಾಮ ಅವರು ತಕ್ಷಣ ಬಸ್ ನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿ, ಮೂರ್ಛೆ ಹೋಗಿದ್ದಾರೆ.
ಈ ವೇಳೆ ಪ್ರಯಾಣಿಕರು ಆತಂಕಕ್ಕೊಳಗಾದರು.
ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಚಾಲಕನನ್ನು ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.

ಸಾರಿಗೆ ಅಧಿಕಾರಿಗಳು ಅವರ ಮನೆಗೆ ಹೋಗಿ ಪದೇ ಪದೇ ಕರ್ತವ್ಯಕ್ಕೆ ಹಾಜರಾಗಿ ಎಂದು ಒತ್ತಡ ಹಾಕಿದ್ದಾರೆ. 55ವರ್ಷ ಮೇಲ್ಪಟ್ಟ ಸಿಬ್ಬಂದಿ ಆರೋಗ್ಯ ತಪಾಸಣೆ ಮಾಡಿಸಿಕೊ೦ಡು ಕರ್ತವ್ಯಕ್ಕೆ ಹಾಜರಾಗಲು ಸೂಚಿನೆ ನೀಡಿದ್ದರು. ನನ್ನ ಪತಿ ಕರ್ತವ್ಯಕ್ಕೆ ಹಾಜರಾಗಿ ಇವತ್ತು ಮೃತಪಟ್ಟಿದ್ದಾರೆ. ಇದಕ್ಕೆ ಯಾರು ಹೊಣೆ ಸಾರಿಗೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.