ಕಿತ್ತೂರು ರಾಣಿ ಚನ್ನಮ್ಮ ಜಯಂತಿ -ವೀರಜ್ಯೋತಿಗೆ ಸ್ವಾಗತ

ಧಾರವಾಡ, ಅ.19: ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಅಂಗವಾಗಿ, ಕಿತ್ತೂರು ರಾಣಿ ಚೆನ್ನಮ್ಮ ಅವರ ವೀರ ಜ್ಯೋತಿಯು ಇಂದು (ಅ.19) ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಿಂದ ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಿದಾಗ ಸ್ವಾಗತಿಸಲಾಯಿತು.

    ಈ ಮೊದಲು ಬೆಳಗಾವಿ ಜಿಲ್ಲೆ, ಸವದತ್ತಿ ತಾಲೂಕಿನಿಂದ ಧಾರವಾಡ ಜಿಲ್ಲೆಯ ಹಾರೋಬೆಳವಡಿ ಗ್ರಾಮಕ್ಕೆ ಆಗಮಿಸಿ, ನಂತರ ಹಾರೋ ಬೆಳವಡಿ ಮಾರ್ಗವಾಗಿ ಬೆಳಗ್ಗೆ 10-30 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಮುಂಬಾಗದಲ್ಲಿ ಆಗಮಿಸಿದಾಗ ವೀರ ಜ್ಯೋತಿಯನ್ನು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕಲಾತಂಡಗಳೊಂದಿಗೆ ಕಿತ್ತೂರು ರಾಣಿ ಚನ್ನಮ್ಮ ಅವರ ವೀರ ಜ್ಯೋತಿಯನ್ನು ಸ್ವಾಗತಿಸಿ, ಪೂಜಾ ಕಾರ್ಯಕ್ರಮ ನೆರವೇರಿಸಿದರು.
   ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಹಾಗೂ ಸಮಾಜದ ಮುಖಂಡರು, ಗಣ್ಯರು ಹಾಗೂ ಧಾರವಾಡ ಜಿಲ್ಲೆಯ ಎಲ್ಲ ಸಮಾಜ ಬಾಂಧವರು ಮತ್ತು ಕಿತ್ತೂರು ರಾಣಿ ಚನ್ನಮ್ಮ ಅವರ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.