ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಆಯ್ಕೆ ಸಭೆ

ಧಾರವಾಡ, ಜ.21: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲಾಮಟ್ಟದಲ್ಲಿ ಮಹಿಳಾ ದಿನಾಚರಣೆ ನಿಮಿತ್ಯ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಆಯ್ಕೆ ಸಮಿತಿಯ ಸಭೆ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ: ಸುರೇಶ್ ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ಅವರ ಕಚೇರಿ ಸಭಾಂಗಣದಲ್ಲಿ ಜರುಗಿತು.

ಆಯ್ಕೆ ಸಮಿತಿಯ ಸಭೆಯಲ್ಲಿ ಪ್ರಶಸ್ತಿಗಾಗಿ ಬಂದಿರುವ ಒಟ್ಟು 16 ಅರ್ಜಿಗಳನ್ನು ಸಮಿತಿ ಸದಸ್ಯರು ಕೂಲಕಂಷವಾಗಿ ಪರಿಶೀಲಸಿದರು. ಅಂತಿಮವಾಗಿ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ಮತ್ತು ಶಿಕ್ಷಣ, ಕಲೆ, ಸಾಹಿತ್ಯದಲ್ಲಿ ಸಾಧನೆ ಮಾಡಿದ ತಲಾ ಓರ್ವ ಸಾಧಕರನ್ನು ಆಯ್ಕೆ ಮಾಡಲಾಯಿತು. ಒಟ್ಟು 5 ಜನ ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. 
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಪ್ರತಿನಿಧಿ ಶಿವಲೀಲಾ ಕಳಸಣ್ಣವರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಆಯ್ಕೆ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು.