ಕಿತ್ತೂರ ರಾಣಿ ಚನ್ನಮ್ಮ ಕೊಡುಗೆ ಅವಿಸ್ಮರಣೀಯ

ಕಲಬುರಗಿ:ಫೆ.02:ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ ದೊರೆಕಿಸಿಕೊಡುವಲ್ಲಿ, ಸಾಮಾಜಿಕ ನ್ಯಾಯಕ್ಕಾಗಿ, ಮಾನವೀಯ, ನೈತಿಕ ಮೌಲ್ಯಗಳ ರಕ್ಷಣೆಗಾಗಿ, ದೇಶದ ಸ್ವಾತಂತ್ರದ ಪ್ರಥಮ ಹೋರಾಟಗಾರ್ತಿಯಾಗಿ ಬಲಿದಾನವಾದ ವೀರ ಮಹಿಳೆ ಕಿತ್ತೂರ ರಾಣಿ ಚನ್ನಮ್ಮ ಶೂರ, ತ್ಯಾಗ, ಸ್ವಾಭಿಮಾನ, ದೇಶಪ್ರೇಮ, ಕೊಡುಗೆ ಅವಿಸ್ಮರಣೀಯವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ.ಪಾಟೀಲ ಹೇಳಿದರು.
ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ‘ಶಿವಾ ವಿದ್ಯಾ ಮಂದಿರ ಪ್ರೌಢಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ವೀರಮಾತೆ ಕಿತ್ತೂರ ರಾಣಿ ಚನ್ನಮ್ಮ ಪುಣ್ಯಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ ಅವರು ಮಾತನಾಡುತ್ತಿದ್ದರು.
ಹೊದಲೂರ ಸಿಆರ್‍ಪಿ ವೀರೇಶ ಬೋಳಶೆಟ್ಟಿ ನರೋಣಾ ಮಾತನಾಡಿ, ಚನ್ನಮ್ಮ ಅವರು ಮಹಿಳೆಯರಿಗೆ ಆದರ್ಶವಾಗಿದ್ದಾರೆ. ನಮ್ಮ ನಾಡಿನ ಹೆಮ್ಮೆಯ ಧೀರ ಮಹಿಳೆಯಾಗಿ ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಅಮೂಲ್ಯವಾದ ಕೊಡುಗೆಯ ಮೂಲಕ ಕನ್ನಡಿಗರೆಲ್ಲರು ಹೆಮ್ಮೆಪಡುವಂತಾಗಿದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಶಾಲೆಯ ಮುಖ್ಯ ಶಿಕ್ಷಕಿ ಸಂಗೀತಾ ಸಾಲಿ, ಪ್ರಮುಖರಾದ ಬಸಯ್ಯಸ್ವಾಮಿ ಹೊದಲೂರ, ದೇವೇಂದ್ರಪ್ಪ ಗಣಮುಖಿ, ಶಿವಯೋಗೆಪ್ಪಾ ಎಸ್.ಬಿರಾದಾರ ಸೇರಿದಂತೆ ಮತ್ತಿತರರಿದ್ದರು.