ಹುಬ್ಬಳ್ಳಿ, ಜೂ 19: ರಾಜ್ಯ ಕಾರ್ಮಿಕ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ನಗರದ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳಿಗೆ ತರಾಟೆ ತಗೆದುಕೊಂಡ ಅವರು, ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ಸಚಿವರು ರೋಗಿಗಳ ಬಳಿ ತೆರಳಿ ಅವರ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯಲ್ಲಿ ಹೇಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ರೋಗಿಗಳಿಂದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.