ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಂದ ಪ್ರತಿಭಟನೆ


ಹುಬ್ಬಳ್ಳಿ, ನ30: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಕಿಮ್ಸ್‍ನ ವೈದ್ಯಕೀಯ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು.
ಕಳೆದ ಆರು ತಿಂಗಳುಗಳಿಂದ ಸರ್ಕಾರ ಕೋವಿಡ್ ಭತ್ಯೆಯನ್ನು ನೀಡಿಲ್ಲವೆಂದು ವಿದ್ಯಾರ್ಥಿಗಳು ಖಂಡಿಸಿದರು.
ಕೋವಿಡ್ ಭತ್ಯೆ ತ್ವರಿತವಾಗಿ ಪಾವತಿ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಅವರು ಆಗ್ರಹಿಸಿದರು.
ಬೇಡಿಕೆಗaಳನ್ನು ಈಡೇರಿಸುವವರೆಗೆ ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.