ಕಿರಿದಾದ ರಸ್ತೆ ಟ್ರಾಫಿಕ್ ಸಮಸ್ಯೆ: ಸಂಚಾರಕ್ಕೆ ತೊಂದರೆ

ದುರುಗಪ್ಪ ಹೊಸಮನಿ
ಲಿಂಗಸುಗೂರು,ಜ.೧೧- ಪಟ್ಟಣದಲ್ಲಿ ರಸ್ತೆ ಅಗಲೀಕರಣ ವಿಳಂಬದಿಂದಾಗಿ ಪಟ್ಟಣದಲ್ಲಿ ದಿನ ನಿತ್ಯ ಸಂಚಾರ ದಟ್ಟಣೆ ಹೆಚ್ಚಾಗಿದೆ ಇದರಿಂದ ಸಾರ್ವಜನಿಕರಿಗೆ ಪಾದಚಾರಿಗಳು ರಸ್ತೆ ದಾಟುವಾಗ ಹರಸಾಹಸ ಪಡುತ್ತಿದ್ದಾರೆ .
ಕಣ್ಣು ಇದ್ದರು ಕುರುಡರಾದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮೌನ ವಹಿಸಿರುವುದು ನಿರ್ಲಕ್ಷ್ಯ ದಿಂದ ರಸ್ತೆ ಅಗಲೀಕರಣಕ್ಕೆ ಅಧಿಕಾರಿಗಳ ಬೇಜವಾಬ್ದಾರಿತನದಿಂದ ರಸ್ತೆ ವಿಳಂಬಕ್ಕೆ ಕಾರಣವಾಗಿದೆ
ಇತ್ತ ಪುರಸಭೆ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಾಧಿಕಾರಿಗಳು ರಸ್ತೆ ಅಗಲೀಕರಣಕ್ಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ನಾಗರಿಕರು ಆರೋಪ ಮಾಡಿದ್ದಾರೆ.
ಬಸ್ ನಿಲ್ದಾಣದ ವೃತ್ತದಲ್ಲಿ ರಸ್ತೆ ಸೇರಿದಂತೆ ನಾನಾ ಕಡೆ ಟ್ರಾಫಿಕ್ ಕಿರಿಕಿರಿ ಉಂಟಾಗುತ್ತಿದ್ದು, ಸಾರ್ವಜನಿಕರು ನಿತ್ಯ ತೊಂದರೆ ಪಡುತ್ತಿದ್ದಾರೆ.
ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಜನದಟ್ಟಣೆ ಹಾಗೂ ಖಾಸಗಿ ವಾಹನ ಸಂಚಾರ ಹೆಚ್ಚಾಗುತ್ತಿದ್ದರಿಂದ ಸಾರ್ವಜನಿಕರು ಮತ್ತು ದ್ವಿಚಕ್ರ ವಾಹನ ಸವಾರರು ತೊಂದರೆ ಪಡುತ್ತಿದ್ದಾರೆ. ಇಲ್ಲಿನ ಬಸ್ ನಿಲ್ದಾಣದ ಬಳಿಯ ವತ್ತದಲ್ಲಿ ಖಾಸಗಿ ವಾಹನಗಳು ರಸ್ತೆಯಲ್ಲಿ ನಿಲ್ಲುತ್ತಿದ್ದರಿಂದ ಬಸ್‌ಗಳ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದ್ದು, ಬಹುತೇಕ ಖಾಸಗಿ ವಾಹನಗಳು ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡುತ್ತಿವೆ ಎಂದು ಪಟ್ಟಣದ ವಾಸಿಗಳು ಆರೋಪಿಸಿದ್ದಾರೆ.
ಪ್ರತಿ ಶನಿವಾರ ಸಂತೆ ನಡೆಯುತ್ತಿರುವ ಕಾರಣ ಗ್ರಾಮದಲ್ಲಿ ಹೆಚ್ಚಾಗಿ ಟ್ರಾಫಿಕ್ ಕಿರಿಕಿರಿ ಉಂಟಾಗುತ್ತಿದೆ. ಖಾಸಗಿ ವಾಹನಗಳ ಚಾಲಕರು ಮತ್ತು ಮಾಲೀಕರು ಪ್ರಯಾಣಿಕರನ್ನು ವಾಹನದಲ್ಲಿ ಕರೆದುಕೊಂಡು ಹೋಗುವುದಕ್ಕೆ ರಸ್ತೆಯ ನಡು ಜಾಗದಲ್ಲಿ ನಿಂತು ಹರಸಾಹಸ ಪಡುತ್ತಿದ್ದರೂ ಪೊಲೀಸರು ಮಾತ್ರ ಕಣ್ಣಿಗೆ ಕಂಡರೂ ಕಾಣದಂತೆ ವರ್ತಿಸುತ್ತಿದ್ದಾರೆ. ಸಮಸ್ಯೆ ಅರಿತು ಟ್ರಾಫಿಕ್ ಸಮಸ್ಯೆಗೆ ಪೋಲೀಸ್ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಸಾರ್ವಜನಿಕರ ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.