ಕಿರುಕುಳ ಖಂಡಿಸಿ ವಸತಿ ಶಾಲಾ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕಲಬುರಗಿ,ನ.20- ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ ಮತ್ತು ವಸತಿ ಶಾಲೆಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರ ಮೇಲಾಗುತ್ತೀರು ಕಿರುಕುಳ ಮತ್ತು ಅನ್ಯಾಯವನ್ನು ಖಂಡಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೆತೃತ್ವದಲ್ಲಿ ಬೃಹತ ಪ್ರತಿಭಟನಾ ಪ್ರದರ್ಶನ ಕೈಗೊಳ್ಳಲಾಯಿತು.
ಸುಮಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು, ಹೊಸಬರ ನೇಮಕಾತಿಯಲ್ಲಿ ಹಳೆಬರಿಗೆ ಅನ್ಯಾಯ ಅಗದಂತೆ ನೋಡಿಕೊಳ್ಳಬೇಕು, ಹೊಸ ನೇಮಕಾತಿಯಲ್ಲಿ ನಡೆಯುತ್ತಿರುವ ಅಕ್ರಮದ ಬಗ್ಗೆ ತನಿಖೆ ಕೈಗೊಳ್ಳಬೇಕು, ನೌಕರರ ಸಂಘದ ಜಿಲ್ಲಾಧ್ಯಕ್ಷರನ್ನು ಅಪಮಾನಿಸಿದ ಶಿಕ್ಷಕ ರೇವಣಸಿದ್ದಪ್ಪ ಅವರನ್ನು ಸೇವೆಯಿಂದ ಅಮಾನತ್ತು ಗೊಳಿಸಬೇಕು ಎಂಬ ಪ್ರಮುಖ ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಕಾಶಿನಾಥ ಬಂಡಿ, ಗುರು ನಂಜೇಶ ಕೋಣಿಕ, ಭೀಮಶೆಟ್ಟಿ ಯಂಪಳ್ಳಿ, ನರಸಮ್ಮ ಚಂದನಕೇರಾ, ಭಾಗಣ್ಣ ದೇವನೂರ ಮತ್ತು ನಾಗರತ್ನ ಮದನಕರ ಸೇರಿದಂತೆ ಹೊರಗುತ್ತಿಗೆ ನೌಕರರು ಭಾಗವಹಿಸಿದ್ದರು.