ಕಿರುತೆರೆಯ ಕಲಾವಿದರು, ತಂತ್ರಜ್ಞರಿಗೆ ನೆರವು: ಕೃತಜ್ಞತೆ

ಬೆಂಗಳೂರು, ಜೂ.3- ಕೊರೋನಾ ಸೋಂಕಿನಿಂದ ಚಿತ್ರೀಕರಣ ನಡೆಯದೆ ಸಂಕಷ್ಟಕ್ಕೆ ಸಿಲುಕಿರುವ ಕಿರುತೆರೆ ಕಲಾವಿದರು ತಂತ್ರಜ್ಞರಿಗೆ ತಲಾ 3000 ರೂಪಾಯಿ ಪ್ರಕಟಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿರ್ಧಾರ ಸ್ವಾಗತಾರ್ಹ ಎಂದು ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಹೇಳಿದೆ.

ಸಂಘದ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪರಿಹಾರ ಪ್ರಕಟಿಸಿದ್ದಾರೆ.ಹೀಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಂಘದ ಅಧ್ಯಕ್ಷರು ಎಸ್ .ವಿ ಶಿವಕುಮಾರ್ ತಿಳಿಸಿದ್ದಾರೆ.

ಕೊರೊನಾ ಸೋಂಕಿನಿಂದ ಕಿರುತೆರೆಯ ಚಿತ್ರೀಕರಣ ಸೇರಿದಂತೆ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದೆ .ಇದರಿಂದ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಜನರು ತೊಂದರೆ ಸಿಲುಕಿದ್ದರು.

ರಾಜ್ಯ ಸರ್ಕಾರ ಈ ಮುಂಚೆ ಪ್ರಕಟಿಸಿರುವ ಕೋವಿಡ್ ಪರಿಹಾರ ಪ್ಯಾಕೇಜ್ ನಲ್ಲಿ ಕಿರುತೆರೆಯ ಕಲಾವಿದರು ತಂತ್ರಜ್ಞರನ್ನು ಸೇರಿಸುವುದು ಮಾಡಿದ ಮನವಿಗೆ ಸ್ಪಂದಿಸಿದ ಅದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಕೊರೊನಾ ಸೋಂಕಿನ ಅಲೆಯಿಂದ ಕಿರುತೆರೆಯಲ್ಲಿ ತೊಡಗಿಸಿಕೊಂಡಿರುವ ಮಂದಿ ಕೆಲಸವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.ಇದನ್ನು ಮನಗಂಡು ಕಿರುತೆರೆಯ ಕಲಾವಿದರು ತಂತ್ರಜ್ಞರ ಪರವಾಗಿ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿ ಪರಿಹಾರ ಪ್ಯಾಕೇಜ್ ಗಾಗಿ ಒತ್ತಾಯಿಸಿತ್ತು ಎಂದು ಹೇಳಿದ್ದಾರೆ.

ಪರಿಹಾರ ಪ್ಯಾಕೇಜ್ ಪ್ರಕಟಿಸಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕಂದಾಯ ಸಚಿವ ಆರ್ ಅಶೋಕ, ವಿಜಯೇಂದ್ರ ಅವರಿಗೆ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಪರವಾಗಿ ಕೃತಜ್ಞತೆ ಸಲ್ಲಿಸುವುಸಮದಾಗಿ ತಿಳಿಸಿದ್ದಾರೆ